ಮುಂದಿನ ಸಿಎಂ ಅರವಿಂದ್ ಬೆಲ್ಲದ್… ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್…!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರಿರುವ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣಿಸಿದ್ದು ಹಲವು ಕುತೂಹಲವನ್ನು ಮೂಡಿಸಿತ್ತು. ಈ ನಡುವೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅರವಿಂದ್ ಬೆಲ್ಲದ್ ಮುಂದಿನ ಸಿಎಂ ಎಂಬ ಪೋಸ್ಟ್ ಗಳು ವೈರಲ್ ಆಗುತ್ತಿವೆ.
Published: 13th June 2021 11:44 AM | Last Updated: 14th June 2021 03:19 PM | A+A A-

ಅರವಿಂದ್ ಬೆಲ್ಲದ್
ಧಾರವಾಡ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರಿರುವ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣಿಸಿದ್ದು ಹಲವು ಕುತೂಹಲವನ್ನು ಮೂಡಿಸಿತ್ತು. ಈ ನಡುವೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅರವಿಂದ್ ಬೆಲ್ಲದ್ ಮುಂದಿನ ಸಿಎಂ ಎಂಬ ಪೋಸ್ಟ್ ಗಳು ವೈರಲ್ ಆಗುತ್ತಿವೆ.
ಅರವಿಂದ್ ಬೆಲ್ಲದ್ ಬೆಂಬಲಿಗರು ಶಾಸಕ ಅರವಿಂದ್ ಬೆಲ್ಲದ್ ಅವರ ಫೋಟೋಹಾಕಿ ಮುಂದಿನ ಸಿಎಂ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಸಂಭ್ರಮಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.
ಹುಬ್ಬಳ್ಳಿ-ಧಾರವಾಡ ಮಂದಿ ಫೇಸ್ ಬುಕ್ ಖಾತೆಯಲ್ಲಿ ಇಂತಹ ಪೋಸ್ಟ್ ಹಾಕಲಾಗಿದ್ದು, ಉತ್ತರ ಕರ್ನಾಟಕದ ವೀರಶೈವ ಲಿಂಗಾಯತ ಸಿಎಂ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗುತ್ತಿವೆ.