ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ತಟ್ಟಿದೆ; ಸಿದ್ದರಾಮಯ್ಯ ಕೈ ಬಿಟ್ಟರೆ ಕಾಂಗ್ರೆಸ್ ನಿರ್ನಾಮ!

ಎಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಹಾಗಾಗಿಯೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.

Published: 18th June 2021 09:53 AM  |   Last Updated: 18th June 2021 12:37 PM   |  A+A-


Devegowda and siiddaramaiah

ದೇವೇಗೌಡ ಮತ್ತು ಸಿದ್ದರಾಮಯ್ಯ

Posted By : Shilpa D
Source : Online Desk

ಹಾಸನ: ಎಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಹಾಗಾಗಿಯೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಉಳಿಯಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ. ಅವರು ಇಲ್ಲದಿದ್ದರೇ ಕಾಂಗ್ರೆಸ್ ಎಂದೋ ನಿರ್ನಾಮವಾಗುತ್ತಿತ್ತು ಸಿದ್ದರಾಮಯ್ಯ ಕೈ ಬಿಟ್ಟರೆ ಈಗಲೂ ಪಕ್ಷ ಮುಳುಗುತ್ತೆ. ಸದ್ಯ ಕಾಂಗ್ರೆಸ್‌ ಅನ್ನು ಶೇಕಡಾ 70ಕ್ಕೆ ತಂದು ನಿಲ್ಲಿಸಿದ್ದಾರೆ. ಈ ವಿಚಾರವನ್ನು ನೇರವಾಗಿಯೇ ಹೇಳುತ್ತೇನೆ ಎಂದು ಸಿದ್ದರಾಮಯ್ಯ ಪರ ರೇವಣ್ಣ ಬ್ಯಾಟಿಂಗ್ ಮಾಡಿದ್ದಾರೆ. 

ಸಿದ್ದರಾಮಯ್ಯನವರಿಂದಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಎಪ್ಪತ್ತು ಸ್ಥಾನವನ್ನು ಗೆದ್ದಿತ್ತು. ಸಿದ್ರಾಮಣ್ಣ ಏನಾದರೂ ಇರದಿದ್ದರೆ ಕಾಂಗ್ರೆಸ್ ಝೀರೋ ಆಗುತ್ತಿತ್ತು ಎಂದು ರೇವಣ್ಣ ಹೇಳಿದರು.

ಜನರ ಜೀವ ಉಳಿಸುವ ಕಡೆ ಗಮನ ಹರಿಸುವ ಬದಲು ಪ್ರಚಾರಕ್ಕಾಗಿ ನಿತ್ಯ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ಮಾಡಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿ.ಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿಯುತ್ತಾರಾ ಎಂದು ಪ್ರಶ್ನಿಸಿದರು.


Stay up to date on all the latest ರಾಜಕೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp