ಕೂಡಲೆ ರಾಜೀನಾಮೆ ನೀಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಕಾಂಗ್ರೆಸ್ ಆಗ್ರಹ

ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ಮುಖಂಡ ಎಚ್‌.ವಿಶ್ವನಾಥ್ ಅವರು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆಗ್ರಹಿಸಿದ್ದಾರೆ. 
ಕೆಪಿಸಿಸಿ ವಕ್ತಾರ ಲಕ್ಷ್ಮಣ್
ಕೆಪಿಸಿಸಿ ವಕ್ತಾರ ಲಕ್ಷ್ಮಣ್

ಮೈಸೂರು: ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ಮುಖಂಡ ಎಚ್‌.ವಿಶ್ವನಾಥ್ ಅವರು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂಡಿದೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ವಿರುದ್ಧ ಬಿಜೆಪಿ ನಾಯಕರೇ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ವಿಶ್ವನಾಥ್ ಅವರ ಆರೋಪ ಸತ್ಯವಾಗಿದೆ. ಅವರು ಬಿಜೆಪಿ ಕಚೇರಿಯಲ್ಲಿಯೇ ಕುಳಿತು ಈ ಹೇಳಿಕೆ ನೀಡಿದ್ದಾರೆ. ಟೆಂಡರ್ ನಲ್ಲಿ ಕೇಂದ್ರಕ್ಕೂ ಪಾಲು ಹಂಚಿಕೆಯಾಗಿದೆ. ಈ ಸಂಬಂಧ ನಾವು ಹೈಕೋರ್ಟ್, ಇಡಿ ಮತ್ತು ಸಿಬಿಐಗೆ ದೂರು ನೀಡುತ್ತೇವೆಂದು ಹೇಳಿದ್ದಾರೆ. 

ಇದೇ ವೇಳೆ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ಆರ್‌ಬಿಐನಿಂದ 1.8 ಲಕ್ಷ ಕೋಟಿ ರೂ.ಗಸಾಲ ಪಡೆದಿದೆ, ಇದು ಇಲ್ಲಿಯವರೆಗೆ ಯಾವುದೇ ಸರ್ಕಾರ ಇಷ್ಟೊಂದು ಮೊತ್ತದ ಸಾಲ ಪಡೆದಿಲ್ಲ. ಈ ಎಲ್ಲಾ ಹಣ ಎಲ್ಲಿ ಹೋಯಿತು? ಕೂಡಲೇ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮೊದಲು ವಿಧಾನಸಭೆಯನ್ನು ವಿಸರ್ಜಿಸಬೇಕೆಂದು ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com