ಭಿನ್ನಮತದ ಬೇಗುದಿಯ ನಂತರ ಮೊದಲ ಸಚಿವ ಸಂಪುಟ ಸಭೆ: ಅಶಿಸ್ತಿನಿಂದ ವರ್ತಿಸಿದ ಸಚಿವರಿಗೆ ಕೊಕ್?

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ.

ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸಡಿಲಗೊಂಡ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ, ಸಭೆಯಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಾಧ್ಯತೆ ಬಗ್ಗೆ ಚರ್ಚಿಸಲಾಗುತ್ತದೆ.

ಅರುಣ್ ಸಿಂಗ್ ಅವರೊಂದಿಗಿನ ಒನ್ ಟು ಒನ್ ಸಭೆಯಲ್ಲಿ ಅನೇಕ ಮಂತ್ರಿಗಳು ಸಿಎಂ ಕಾರ್ಯವೈಖರಿಯ ವಿರುದ್ಧ ದೂರು ನೀಡಿದ್ದಾರೆ ಎಂಬ ವರದಿಗಳ ನಂತರ ಸೋಮವಾರ ಯಡಿಯೂರಪ್ಪ ನಡೆಸುತ್ತಿರುವ ಸಚಿವ ಸಂಪುಟ ಸಭೆ ಮಹತ್ವದ್ದಾಗಿದೆ ಎನ್ನಲಾಗಿದೆ. ಅರುಣ್ ಸಿಂಗ್ ದೆಹಲಿಗೆ ತೆರಳಿದ ನಂತರ ಪಕ್ಷದಲ್ಲಿ ಅಶಿಸ್ತು ತೋರಿದ ಒಂದಿಬ್ಬರು ಸಚಿವರನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ, ಸದ್ಯ ಶಾಸಕ ರಮೇಶ್ ಜಾರಕಿಹೊಳಿ ಮುಂಬಯಿಗೆ ತೆರಳಿದ್ದಾರೆ ಎನ್ನಲಾಗಿದ್ದು, ಅವರು ಮುಂದಿನ ನಡೆ ಕುತೂಹಲ ಸೃಷ್ಟಿಸಿದೆ. ಕೋವಿಡ್ 19 ಸಾಂಕ್ರಾಮಿಕ ಸಂದರ್ಭದಲ್ಲಿ ಲಸಿಕಾ ಮೇಳದ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಸಚಿವರಿಗೆ ನೀಡುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com