ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಜೆಡಿಎಸ್ ಪ್ರತಿಭಟನೆ: ಎಚ್.ಕೆ. ಕುಮಾರಸ್ವಾಮಿ

ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಳೆದ ವಾರ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು, ಈಗ ಜೆಡಿಎಸ್ ಪ್ರತಿಭಟನೆಗೆ ಮುಂದಾಗಿದೆ.
ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಕೆ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಕೆ ಕುಮಾರಸ್ವಾಮಿ

ಬೆಂಗಳೂರು: ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಳೆದ ವಾರ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ  ನಡೆಸಿತು, ಈಗ ಜೆಡಿಎಸ್ ಪ್ರತಿಭಟನೆಗೆ ಮುಂದಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕೂ ಹಾಗೂ ಗ್ರಾಮ ಮಟ್ಟದಲ್ಲಿ ಬೆಲೆಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ತಿಳಿಸಿದ್ದಾರೆ.

ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಸದಸ್ಯರು ಆಹಾರ ಮತ್ತು ಇಂಧನ ಬೆಲೆಗಳ ಏರಿಕೆಯ ಬಗ್ಗೆ ಸಾಮಾನ್ಯ ಜನರ ದುಃಸ್ಥಿತಿಯ ಬಗ್ಗೆ ಆಯಾ ತಹಶೀಲ್ದಾರರು ಮತ್ತು ಜಿಲ್ಲಾ ಆಯುಕ್ತರ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಬೇಕು ಎಂದು ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನದಿಗೆ ಮೇಕೆದಾಟುವಿನಲ್ಲಿ ಅಣೆಕಟ್ಟೆ ನಿರ್ಮಿಸಲು ಮುಂದಾಗಿರುವ ಕರ್ನಾಟಕದ ಯೋಜನೆಗೆ ತಮಿಳುನಾಡು ಆರಂಭದಿಂದಲೂ ಚಕಾರ ಎತ್ತುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ತಂದು ನನ್ನ ಸರ್ಕಾರ ಧೈರ್ಯ ಪ್ರದರ್ಶಿಸಿತ್ತು. ಪರಿಸರ ಅನುಮತಿ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮತಿ ಸಿಕ್ಕಿಲ್ಲ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಅಣೆಕಟ್ಟೆ ಮೂಲಕ ಬೆಂಗಳೂರಿಗೆ ಕುಡಿಯುವ ನೀರನ್ನು ಹರಿಸುವುದು ಕರ್ನಾಟಕದ ಮಹತ್ವಾ ಕಾಂಕ್ಷೆಯ ಯೋಜನೆ. ಆದರೆ, ಈ ಯೋಜನೆಯಿಂದ ತಮಿಳುನಾಡು ಪಾಲಿನ ನೀರಿಗೆ ಮೋಸವಾಗುತ್ತದೆ ಎಂದು ತಮಿಳುನಾಡು ಸರ್ಕಾರ ಕವೇರಿ ಟ್ರಿಬ್ಯುನಲ್​ನಲ್ಲಿ ಆರೋಪ ಮಾಡಿತ್ತು. ಇದೀಗ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಡಪ್ಪಾಡಿ ಕೆ. ಪಳನಿಸ್ವಾಮಿ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಕೇಂದ್ರದ ಮೇಲೆ ಒತ್ತಡ ನೀಡುತ್ತಿದ್ದಾರೆ. 

ಆದರೆ, ತಮಿಳು ನಾಡಿನಲ್ಲಿ ಬಿಜೆಪಿ ಮಿತ್ರಪಕ್ಷದ ಈ ನಡೆಯನ್ನು ಖಂಡಿಸಿರುವ ಕರ್ನಾಟಕ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ, ಮೇಕೆದಾಟು ಯೋಜನೆಯನ್ನು ತಡೆಹಿಡಿಯುವುದು ಕರ್ನಾಟಕಕ್ಕೆ ಮಾಡಿದ  ದ್ರೋಹ ಎಂದು ಕಿಡಿಕಾರಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com