ಮುಂದಿನ ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ಎಂದ ಸಿದ್ದರಾಮಯ್ಯ: ಡಿಕೆಶಿ ಬೆಂಬಲಕ್ಕೆ ನಿಂತ ಹಿರಿಯ ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶಾಸಕ ಜಮೀರ್ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Published: 22nd June 2021 11:07 AM  |   Last Updated: 22nd June 2021 12:31 PM   |  A+A-


Siddaramaiah

ಸಿದ್ದರಾಮಯ್ಯ

Posted By : Shilpa D
Source : The New Indian Express

ಕೊಪ್ಪಳ: ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶಾಸಕ ಜಮೀರ್ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಿದ್ದರಾಮಯ್ಯ,ಕೇವಲ ಜಮೀರ್‌ ಅಹ್ಮದ್‌ ಮತ್ತು ರಾಘವೇಂದ್ರ ಹಿಟ್ನಾಳ್ ಅವರ ಅಭಿಪ್ರಾಯ ತಿಳಿಸಿದ್ದಾರೆ, ಮುಂದಿನ ಸಿಎಂ ಯಾರಾಗಬೇಕು ಎಂಬ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ಹೈಕಮಾಂಡ್‌ ತೀರ್ಮಾನವೇ ಅಂತಿಮ. ಇದು ಅವರವರ ವೈಯಕ್ತಿಕ ಅಭಿಪ್ರಾಯ ಅಷ್ಟೆ ಎಂದಿದ್ದಾರೆ.

ಪಕ್ಷದ ಹಿತದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಸರಿಯಾಗಿಯೇ ಹೇಳಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿಯೇ ಹೋಗೋಣ ಎಂದಿದ್ದಾರೆ. ಇದಕ್ಕೂ ನಾವು ಬದ್ಧವಾಗಿದ್ದೇವೆ. ನಾಯಕತ್ವದ ಕುರಿತು ನಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಅವರು ತಮ್ಮ ವೈಯಕ್ತಿಕ ವೆಚ್ಚದಲ್ಲಿ 15 ಸಾವಿರ ದಿನಸಿ ಕಿಟ್‌ಗಳನ್ನು ವಿತರಣೆ ಮಾಡುತ್ತಿದ್ದಾರೆ.

ಇನ್ನೂ ಮುಂದಿನ ಸಿಎಂ ಬಗ್ಗೆ ನಡೆಯುತ್ತಿರುವ ಚರ್ಚೆಯ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರು ಅದರಲ್ಲೂ ವಿಶೇಷವಾಗಿ ಹಳೇ ಮೈಸೂರು ಭಾಗದ ಕೈ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೋಮವಾರ ಮಾಜಿ ಡಿಸಿಎಂ ಜಿ.ಪರಮೇಶ್ವರ್, ಶಿವಕುಮಾರ್ ಅವರೇ ನಮ್ಮ ಸರ್ವೋಚ್ಚ ನಾಯಕ ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.


Stay up to date on all the latest ರಾಜಕೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp