ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳದಿರುವುದಕ್ಕೆ ಬೇಸರ: ಮಹಾರಾಷ್ಟ್ರ ತೆರಳಿ ಫಡ್ನವೀಸ್ ಭೇಟಿಯಾದ ಜಾರಕಿಹೊಳಿ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳದಿರುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಕ್ಕೆ ಭೇಟಿ ನೀಡಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳದಿರುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ಮೇಲೆ ಒತ್ತಡ ತಂತ್ರ ಅನುಸರಿಸಲು ಮುಂದಾಗಿದ್ದು. ಇದರಂತೆ ಮಹಾರಾಷ್ಟ್ರ ರಾಜ್ಯಕ್ಕೆ ಭೇಟಿ ನೀಡಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 

ಈ ಕುರಿತು ಜಾರಕಿಹೊಳಿಯವರ ಆಪ್ತ ಸ್ನೇಹಿತ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರು ಪ್ರತಿಕ್ರಿಯೆ ನೀಡಿ, ಜಾರಕಿಹೊಳಿ ಪಕ್ಷವನ್ನು ತೊರೆಯುವುದಿಲ್ಲ. ಅವರಿಗೆ ಅಂತಹ ಆಲೋಚನೆಗಳೂ ಬಂದಿಲ್ಲ. ಶಾಸಕ ಸ್ಥಾನಕ್ಕೆ ಜಾರಕಿಹೊಳಿ ರಾಜೀನಾಮೆ ನೀಡುತ್ತಾರೆಂಬುದು ಸುಳ್ಳು ಸುದ್ದಿ. ಎಲ್ಲಾ ವರದಿಗಳು ಆಧಾರರಹಿತವಾದದ್ದು ಎಂದು ಹೇಳಿದ್ದಾರೆ. 

ಜಾರಿಕಿಹೊಳಿಯವರು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಶನಿವಾರ ಭೇಟಿಯಾದುದ್ದರ ಹಿಂದೆ ಯಾವುದೇ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಅಲ್ಲದೆ, ಜಾರಕಿಹೊಳಿ ಫಡ್ನವೀಸ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಅವರದೊಂದಿಗೆ ಕುಮಟಳ್ಳಿ ಕೂಡ ಇದ್ದರು ಎಂಬ ಮಾಧ್ಯಮಗಳ ವರದಿಗೆ ಪ್ರತಿಕ್ರಿಯೆ ನೀಡಿ, ನಾನು ಮುಂಬೈ ನಗರಕ್ಕೆ ಹೋಗಿಯೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವವನ್ನು ನಾವು ಒಪ್ಪಿಕೊಂಡಿದ್ದೇವೆ. ಸರ್ಕಾರ ತನ್ನ ಅಧಿಕಾರಾವಧಿ ಪೂರ್ಣಗೊಳಿಸುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಂದು ತಿಳಿಸಿದ್ದಾರೆ. 

ಇದೇ ವೇಳೆ ಪಕ್ಷ ಹಾಗೂ ಸರ್ಕಾರವನ್ನು ಮುನ್ನಡೆಸುತ್ತಿರುವ ಯಡಿಯೂರಪ್ಪ ಅವರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿಗಳು ಕೊರೋನಾ ಸಾಂಕ್ರಾಮಿಕ ರೋಗವಿರಲಿ, ಪ್ರವಾಹ ಪರಿಸ್ಥಿತಿ ಅಥವಾ ಬರ ಪರಿಸ್ಥಿತಿಯೇ ಇರಲಿ ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತಿದ್ದಾರೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com