ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ನ ಮುಖ್ಯಮಂತ್ರಿ ಅಭ್ಯರ್ಥಿ: ಹೆಚ್ ಡಿ ರೇವಣ್ಣ

ಹೆಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಹೇಳಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್ ಡಿ ರೇವಣ್ಣ, ಜೆಡಿಎಸ್ ನಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಬಿರುಕು ಇಲ್ಲ ಎಂದರು. 
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ

ಹಾಸನ:  ಹೆಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಹೇಳಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್ ಡಿ ರೇವಣ್ಣ, ಜೆಡಿಎಸ್ ನಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಬಿರುಕು ಇಲ್ಲ ಎಂದರು. 

2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಸಿಕ್ಕರೆ ಜೆಡಿಎಸ್ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ಇಲ್ಲದಿದ್ದರೆ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದರು. 

ಜೆಡಿಎಸ್ ಕೂಡ ಬಿಜೆಪಿಯೊಂದಿಗೆ ಸಮಾನತೆಯನ್ನು ಕಾಪಾಡಿಕೊಳ್ಳಲು ಮತ್ತು ಚುನಾವಣೆಗಳಲ್ಲಿ ಸ್ವತಂತ್ರವಾಗಿ ಹೋರಾಡಲು ನಿರ್ಧರಿಸಿದೆ ಎಂದು ಹೆಚ್. ಡಿ. ರೇವಣ್ಣ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ತಡೆ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡುವ ವಾರ್ಷಿಕ ಅನುದಾನದಲ್ಲಿ ಕಡಿತ ಮಾಡಿರುವ ರಾಜ್ಯ ಸರ್ಕಾರವನ್ನು ಟೀಕಿಸಿದ ಹೆಚ್ ಡಿ, ರೇವಣ್ಣ, ಎ ಗ್ರೇಡ್ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕ 13 ಲಕ್ಷ ಹಣದ ಬದಲಿಗೆ 6 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. 

ಹಣಕಾಸಿನ ಪರಿಸ್ಥಿತಿಗಳು ಉತ್ತಮವಾಗಿದ್ದರೂ ಸರ್ಕಾರವು ಅಗತ್ಯವಿರುವ ಯೋಜನೆಗಳು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗೆ ನೀಡುವ ಅನುದಾನವನ್ನು ನಿಲ್ಲಿಸಿದೆ.  ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಜೆಡಿಎಸ್ ಚಿಂತನೆ ನಡೆಸಿದೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರೇವಣ್ಣ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com