ಸುಳ್ಳು ಆರೋಪ ಮಾಡಿ ತೇಜೋವಧೆಗೆ ಯತ್ನ: ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸಾರಾ ಮಹೇಶ್ ನಿರ್ಧಾರ

ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ, ತೇಜೋವಧೆಗೆ ಯತ್ನಿಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಕೆ.ಆರ್‌. ನಗರ ಶಾಸಕ ಸಾ.ರಾ. ಮಹೇಶ್‌ ತಿಳಿಸಿದ್ದಾರೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ

ಮೈಸೂರು: ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ, ತೇಜೋವಧೆಗೆ ಯತ್ನಿಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಕೆ.ಆರ್‌. ನಗರ ಶಾಸಕ ಸಾ.ರಾ. ಮಹೇಶ್‌ ತಿಳಿಸಿದ್ದಾರೆ.

ರೋಹಿಣಿ ಸಿಂಧೂರಿಯವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಸಾರಾ ಚೌಲ್ಟ್ರಿಯನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿದೆ ಎಂದಿದ್ದರು, ಜೊತೆಗೆ ಮೈಸೂರಿನಲ್ಲಿ ಗೋಮಾಳ ಒತ್ತುವರಿ ಮಾಡಿದ್ದೇನೆ ಎಂದು ಆರೋಪಿಸಿದ್ದರು. ಆದರೆ ಪ್ರಾದೇಶಿಕ ಆಯುಕ್ತರು ರಚಿಸಿದ್ದ ತಂಡ ನೀಡಿರುವ ವರದಿಯಲ್ಲಿ ತಮಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ರೀತಿ ತಮ್ಮ ತೇಜೋವಧೆ ಹಾಗೂ ಸುಳ್ಳು ಆರೋಪ ಮಾಡಿರುವುದರಿಂದ ಮುಂದಿನ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಲು ಅನುಮತಿ ಕೋರಿ ಸ್ವೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಂಪೂರ್ಣ ದಾಖಲೆಗಳ ಸಮೇತ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ನನ್ನ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾರಾ ಮಹೇಶ್ ದೂರಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com