ಬೇರೆ ಪಕ್ಷದಿಂದ ಬಂದು ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಡಿಕೆಶಿ

ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಹಾಸನ: ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ತತ್ವ, ಸಿದ್ಧಾಂತ ಮತ್ತು ನಾಯಕತ್ವ ಒಪ್ಪಿಕೊಂಡು ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಇದಕ್ಕಾಗಿ ಪಕ್ಷ ಸೇರಲು ಬಯಸುವವರ ಪಟ್ಟಿಯನ್ನು ಸ್ಥಳೀಯ ಸಮಿತಿಗಳ ಮುಂದೆ ಇಟ್ಟು, ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು’ ಎಂದು ಪರೋಕ್ಷವಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ. ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರಿಗೆ ಮಾತ್ರ ಪ್ರವೇಶವಿದೆ’ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಸಿದ್ದರಾಮಯ್ಯ ಮುಂದಿನ  ಮುಖ್ಯಮಂತ್ರಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಡಿಕೆ ಶಿವಕುಮಾರ್ ಪರೋಕ್ಷವಾಗಿ ಜಮೀರ್ ಅಹ್ಮದ್ ಗೆ ಮಾತಿನಲ್ಲಿ ತಿವಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com