ನಿಂತ ನಾಯಕತ್ವ ಬದಲಾವಣೆ: ಇದೀಗ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಸಿದ್ಧತೆ 

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ  ಸಾಧ್ಯವಿಲ್ಲವೆಂಬ ಸ್ಪಷ್ಟತೆಯನ್ನು ದೆಹಲಿಯ ವರಿಷ್ಠರು ನೀಡುತ್ತಿದ್ದಂತೆಯೇ ಇದೀಗ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ಧ್ವನಿ‌ ಕೇಳಿಬಂದಿದೆ. ಹೀಗೆ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷರೇ ಮುಂದಾಗಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ  ಸಾಧ್ಯವಿಲ್ಲವೆಂಬ ಸ್ಪಷ್ಟತೆಯನ್ನು ದೆಹಲಿಯ ವರಿಷ್ಠರು ನೀಡುತ್ತಿದ್ದಂತೆಯೇ ಇದೀಗ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ಧ್ವನಿ‌ ಕೇಳಿಬಂದಿದೆ. ಹೀಗೆ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷರೇ ಮುಂದಾಗಿದ್ದಾರೆ.

ಕಳೆದ ಜೂನ್ 18 ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಹಾಲಿ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸುವ ಕುರಿತು ಚರ್ಚೆ ನಡೆಸಲಾಗಿತ್ತು. ಅಲ್ಲದೇ, ಈಗಾಗಲೇ ಅಧಿಕಾರ ಅನುಭವಿಸಿರುವ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಿ, ಪಕ್ಷಕ್ಕಾಗಿ ದುಡಿದಿರುವ ಇನ್ನಷ್ಟು ಕಾರ್ಯಕರ್ತರಿಗೆ ಅವಕಾಶ ಕಲ್ಪಿಬೇಕು ಎಂದು ಅರುಣ್ ಸಿಂಗ್ ಸೂಚನೆ ನೀಡಿದ್ದರು.

ಶನಿವಾರ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಾದ ಬಳಿಕ ನಳಿನ್ ಕುಮಾರ್ ಕಟೀಲ್, ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ನಿಗಮ ಮಂಡಳಿಗೆ ನೇಮಕವಾಗುವ ಸಂಭಾವ್ಯರ ಪಟ್ಟಿಯನ್ನು ಪಕ್ಷದ ವತಿಯಿಂದ ಸಿದ್ದಪಡಿಸುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com