ಬಿಜೆಪಿ ಉನ್ನತ ನಾಯಕರ ತೀರ್ಪಿಗಾಗಿ ಕಾಯುತ್ತಿದ್ದೇನೆ: ಸಿಎಂ ಯಡಿಯೂರಪ್ಪ ನಾಯಕತ್ವ ಬಗ್ಗೆ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ

ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಮತ್ತೆ ಸಿಎಂ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಮತ್ತೆ ಹೇಳಿಕೆ ನೀಡಿದ್ದಾರೆ. 
ಯೋಗೇಶ್ವರ್
ಯೋಗೇಶ್ವರ್

ಕಲಬುರಗಿ: ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಮತ್ತೆ ಸಿಎಂ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಮತ್ತೆ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿರುವ ನಾಯಕತ್ವದ ವಿಷಯವನ್ನು ಬಗೆಹರಿಸಲು ಬಿಜೆಪಿ ವರಿಷ್ಠರು ಸಹಾಯ ಮಾಡುವ ವಿಶ್ವಾಸವಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ. 

"ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಕೇಂದ್ರದ ನಾಯಕರು ಮಾರ್ಗಸೂಚಿನಗಳನ್ನು ನೀಡಿದಂತೆಯೇ ನಾಯಕತ್ವದ ವಿಷಯವನ್ನು ಬಗೆಹರಿಸುವುದಕ್ಕೂ ಮಾರ್ಗಸೂಚಿಗಳನ್ನು ನೀಡಲಿದ್ದಾರೆ ಎಂಬ ವಿಶ್ವಾಸವಿದೆ" ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಯೋಗೇಶ್ವರ್ ಯಡಿಯೂರಪ್ಪ ವಿರೋಧಿ ಬಣದ ಪ್ರಮುಖ ನಾಯಕರ ಪೈಕಿ ಗುರುತಿಸಿಕೊಂಡಿದ್ದು, ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. 

"ವರದಿಗಾರರೊಂದಿಗೆ ಕಲಬುರಗಿಯಲ್ಲಿ ಮಾತನಾಡಿರುವ ಅವರು, ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ನಿರ್ಗಮಿಸುವ ವಿಷಯವಾಗಿ ಪರ- ವಿರೋಧದ ಚರ್ಚೆಗಳನ್ನು ಮಾಡಲಾಗಿದೆ. ಅಂತಿಮ ನಿರ್ಣಯಕ್ಕಾಗಿ ಕಾಯುತ್ತಿದ್ದೇವೆ" ಎಂದು ಹೇಳಿದ್ದಾರೆ

ಇದೇ ವೇಳೆ ಕಾಂಗ್ರೆಸ್ ಪಕ್ಷದ ಬಗ್ಗೆಯೂ ಮಾತನಾಡಿರುವ ಸಿಪಿ ಯೋಗೇಶ್ವರ್, ಕಾಂಗ್ರೆಸ್ ನಲ್ಲಿಯೂ ನಾಯಕತ್ವದ ಚರ್ಚೆ ನಡೆಯುತ್ತಿದೆ, ಕಾಂಗ್ರೆಸ್ ಗೆ 7 ದಶಕಗಳ ಕಾಲ ಬೆಂಬಲಿಸಿದ್ದಕ್ಕೆ ದಲಿತರಿಗೆ ಸಿಎಂ ಸ್ಥಾನ ಸಿಕ್ಕಿಲ್ಲ ಈ ಕಾರಣದಿಂದ ದಲಿತರೂ ವಂಚಿತರಾಗಿದ್ದಾರೆ ಎಂಬ ಭಾವನೆ ಮೂಡುತ್ತಿದೆ. ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಯೋಗೇಶ್ವರ್ ಹೇಳಿದ್ದಾರೆ. 

ಡಿ.ಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ಕನಸು ಕಾಣುತ್ತಿದ್ದಾರೆ. ಆದರೆ ಪಕ್ಷದಲ್ಲಿ ಅವರನ್ನು ಬೆಂಬಲಿಸುವ ಹೆಚ್ಚು ಶಾಸಕರಿಲ್ಲ. ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಲ್ಲಿರುವವರೆಗೂ ಡಿ.ಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ಸಾಧ್ಯವಿಲ್ಲ, ಇನ್ನೆರಡು ವರ್ಷಗಳ ನಂತರ ಏನಾಗುತ್ತೋ ನೋಡೋಣ ಎಂದು ಯೋಗೇಶ್ವರ್ ಮಾರ್ಮಿಕವಾಗಿ ನುಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com