ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ ಅದಕ್ಕಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ ಅದಕ್ಕಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ನಂತರ ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಒಂದು ಕಣ್ಣಿನ ಲೇಸರ್ ಚಿಕಿತ್ಸೆ ನಡೆಸಲಾಗಿದೆ ಅವರ ಆರೋಗ್ಯ ವಿಚಾರಿಸಿದ್ದೇನೆ. ಸುದೀರ್ಘವಾಗಿ ಅನೇಕ ವಿಚಾರಗಳ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ರಾಜ್ಯಪಾಲರು ಕೂಡ ಬಹಳ ಸಮಾಧಾನದಿಂದ ಅನೇಕ ವಿಷಯಗಳನ್ನು ತಿಳಿದುಕೊಂಡಿದ್ದಾರೆ. ಯಾವುದೇ ರಾಜಕೀಯ ವಿಚಾರವನ್ನು ರಾಜ್ಯಪಾಲರ ಜೊತೆ ಮಾತನಾಡುವ ಪ್ರಶ್ನೆ ಬರುವುದಿಲ್ಲ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇನೆ ಅವರು ಕೂಡ ಕೆಲವು ಸಲಹೆ ಕೊಟ್ಟಿದ್ದಾರೆ ಎಂದರು.

ಒಳ್ಳೆಯ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮುಂಬರಲಿರುವ ಎರಡು ವರ್ಷದಲ್ಲಿ ಮಾಡಬೇಕಿದೆ. ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ ಅದಕ್ಕಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಬರುವ ಎರಡು ವರ್ಷಗಳ ಕಾಲ ಮಾಡುತ್ತೇನೆ ಎನ್ನುವ ಭರವಸೆಯನ್ನು ರಾಜ್ಯದ ಜನರಿಗೆ, ಕಾರ್ಯಕರ್ತರಿಗೆ ಕೊಡುತ್ತಿದ್ದೇನೆ ಎಂದರು.

ಜಿಲ್ಲಾ ಪ್ರವಾಸ ಮಾಡಿ ಸಮಸ್ಯೆ ತಿಳಿದುಕೊಳ್ಳುವ ತೀರ್ಮಾನ ಮಾಡಿದ್ದೇನೆ. ಆ ನಿಟ್ಟಿನಲ್ಲಿ ಮುಂದಿನ ವಾರದಿಂದ ಪ್ರವಾಸ ಮಾಡುತ್ತೇನೆ. 10-12 ಜಿಲ್ಲೆಗಳಿಗೆ ಪ್ರವಾಸ ಮಾಡುತ್ತೇನೆ ಎನ್ನುವ ಮೂಲಕ ಜಿಲ್ಲಾ ಪ್ರವಾಸದ ಮೂಲಕ ಪಕ್ಷ ಸಂಘಟನೆ ಮಾಡಿ ತಮ್ಮದೇ ನಾಯಕತ್ವ ಎನ್ನುವ ಸಂದೇಶವನ್ನು ವಿರೋಧಿ ಬಣಕ್ಕೆ ಸಂದೇಶ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಾನು ಯಾವುದೇ ವಿಷಯಗಳ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುತ್ತಿಲ್ಲ ಎಲ್ಲವನ್ನೂ ಶಾಂತವಾಗಿ ಕೇಳುತ್ತಿದ್ದೇನೆ, ತಿಳಿದುಕೊಳ್ಳುತ್ತಿದ್ದೇನೆ ನಾನು ಯಾವುದೇ ವಿಷಯದಲ್ಲೂ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಇಷ್ಟು ಮಾತ್ರ ನಿಮಗೆ ಹೇಳುತ್ತೇನೆ ಎಂದರು. ಸಿಡಿ ಪ್ರಕರಣದಲ್ಲಿ ಸಿಲುಕಿಸುವ ಕುರಿತು ಬಿಜೆಪಿಯವರೇ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಮಾಧ್ಯಮಗಳಲ್ಲಿ ಕೇಳಿದ್ದೇನೆ ಅಷ್ಟೇ ಎಂದು ಹೆಚ್ಚು ಮಾತನಾಡಲು ನಿರಾಕರಿಸಿದ ಸಿಎಂ ನಾಯಕತ್ವ ಬದಲಾವಣೆ ಕುರಿತು ವಿಷಯ ಪ್ರಸ್ತಾಪಿಸುತ್ತಿದ್ದಂತೆ ಕೈ ಮುಗಿದು ನಿರ್ಗಮಿಸಿದರು.

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ

ಬೆಂಗಳೂರಿನ ಜನರ ಜೀವನ ಮಟ್ಟದಲ್ಲಿ ಎಲ್ಲ ರೀತಿಯ ರೀತಿಯಲ್ಲಿಯೂ ಉತ್ಕøಷ್ಟತೆಯನ್ನು ಸಾಧಿಸುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸುವುದರ, ಜೊತೆಗೆ ಹಸಿರು ಬೆಂಗಳೂರು ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ “ಕಾಡುಗೋಡಿ ವೃಕ್ಷೋದ್ಯಾನ” , ಕನ್ನಮಂಗಲ “ಸಸ್ಯಶಾಸ್ತ್ರೀಯ ತೋಟ” ,ಕನ್ನಮಂಗಲ ಕೆರೆ ಉದ್ಘಾಟನಾ ಕಾರ್ಯಕ್ರಮ ಹಾಗೂ “ಎಲೆ ಮಲ್ಲಪ್ಪ ಶೆಟ್ಟಿ ಕೆರೆ” ಪರಿವೀಕ್ಷಣೆ-ಜನಪದರು ರಂಗ ಮಂದಿರ ಉದ್ಘಾಟನೆ ಸಮಾರಂಭಗಳಲ್ಲಿ ಪಾಲ್ಗೊಂಡ ಅವರು ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಮೂಲಸೌಕರ್ಯ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ಹಸರೀಕರಣ, ಸ್ವಚ್ಚತೆ ಹಾಗೂ ಸುಗಮ ಸೇವಾ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com