ರಾಹುಲ್ ಗಾಂಧಿಗೆ ಚಿಕಿತ್ಸೆ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಯುವ ನಾಯಕ ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ಅವರು ಕಾಲಿಟ್ಟ ಕಡೆಯಲ್ಲ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದ್ದಾರೆ.

Published: 02nd March 2021 03:30 PM  |   Last Updated: 02nd March 2021 03:30 PM   |  A+A-


Shobha-Rahul

ಶೋಭಾ ಕರಂದ್ಲಾಜೆ-ರಾಹುಲ್ ಗಾಂಧಿ

Posted By : Vishwanath S
Source : UNI

ಚಿಕ್ಕಮಗಳೂರು: ಯುವ ನಾಯಕ ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ಅವರು ಕಾಲಿಟ್ಟ ಕಡೆಯಲ್ಲ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದ್ದಾರೆ.

ಬ್ರಿಟಿಷರನ್ನು ಓಡಿಸಿದವರಿಗೆ ಮೋದಿಯನ್ನು ಓಡಿಸುವುದು ಕಷ್ಟವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಪದೇ-ಪದೇ ಸೋಲುವುದರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ. ಕಾಂಗ್ರೆಸ್ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿದಿಲ್ಲ. 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ನುಡಿದರು.

ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ಕಾಂಗ್ರೆಸ್ ವಿನಾಶವಾಗಿದೆ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. 

ಸಂಸತ್ ಚುನಾವಣೆ ನಡೆಯುವಾಗಲೂ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡುವುದು ನೃತ್ಯ ಮಾಡುವುದರಿಂದ ಜನರನ್ನು ಸೆಳೆ ಮತ ಕಬಳಿಸಬಹುದು ಎಂದು ಅಂದುಕೊಂಡಿದ್ದಾರೆ. ಅದು ಅವರ ಪೆದ್ದುತನ ಎಂದು ಶೋಭಾ ವ್ಯಂಗ್ಯವಾಡಿದರು.

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp