ತುಳಸಿ ಮುನಿರಾಜುಗೌಡಗೆ ಬಿ ಫಾರಂ ವಿತರಣೆ: ನಾಳೆ ನಾಮಪತ್ರ ಸಲ್ಲಿಕೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಇಂದು ರಾಜ್ಯ ವಿಧಾ ನಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಅವರಿಗೆ ಬಿ ಫಾರಂ ವಿತರಿಸಿದರು.
Published: 03rd March 2021 10:56 PM | Last Updated: 03rd March 2021 10:56 PM | A+A A-

ತುಳಸಿ ಮುನಿರಾಜು ಗೌಡ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಇಂದು ರಾಜ್ಯ ವಿಧಾ ನಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಅವರಿಗೆ ಬಿ ಫಾರಂ ವಿತರಿಸಿದರು.
ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಟೀಲ್ ಅವರು ಬಿ ಫಾರಂ ನೀಡಿ ಶುಭ ಕೋರಿದರು.ನಾಳೆ ತುಳಸಿ ಮುನಿರಾಜುಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.ನಾಳೆ ಬೆಳಿಗ್ಗೆ 11.00 ಬಿಜೆಪಿ ಅಭ್ಯರ್ಥಿಯಾಗಿ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ಕುಮಾರ್ ಕಟೀಲ್,ರಾಜ್ಯದ ಸಚಿವರು,ಸಂಸದರು, ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.