ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದಲ್ಲಿ ಮೇಲ್ನೊಟಕ್ಕೆ ಷಡ್ಯಂತ್ರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Published: 04th March 2021 12:11 AM  |   Last Updated: 04th March 2021 01:07 PM   |  A+A-


Ramesh_Jarkiholi_satish_jarkiholi1

ರಮೇಶ್ , ಸತೀಶ್ ಜಾರಕಿಹೊಳಿ

Posted By : Nagaraja AB
Source : Online Desk

ಗೋಕಾಕ್: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದಲ್ಲಿ ಮೇಲ್ನೊಟಕ್ಕೆ ಷಡ್ಯಂತ್ರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನನ್ನ ಪ್ರಕಾರ ರಮೇಶ್ ಜಾರಕಿಹೊಳಿ ನಿನ್ನೆಯೇ ರಾಜೀನಾಮೆ ನೀಡಬೇಕಿತ್ತು. ನಿನ್ನೆಯೇ ರಾಜೀನಾಮೆ ಕೊಟ್ಟಿದ್ದರೆ ಅರ್ಥ ಇರುತಿತ್ತು. ಇಲ್ಲಿಯವರೆಗೂ ಸಾಕಷ್ಟು ಆರೋಪ ಬಂದಾಗ ಬೇರೆ ಪಕ್ಷದವರು ಕೂಡಾ ರಾಜೀನಾಮೆ ಕೊಟ್ಟ ಉದಾಹರಣೆಗಳಿವೆ.

ಈ ಪ್ರಕರಣದಲ್ಲಿ ಷಡ್ಯಂತ್ರ ಕಾಣುತ್ತಿದೆ. ಬೆಳವಣಿಗೆ ಸಹಿಸದೆ ಮಾಡಿರುವ ಸಾಧ್ಯತೆಯೂ ಇದೆ. ಸಿಡಿ ನಕಲಿಯೋ ಅಥವಾ ನಿಜವೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸಿ, ಸತ್ಯಾಂಶವನ್ನು ಹೊರಗೆ ತರಬೇಕಾಗಿದೆ ಎಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಿಡಿ ಪ್ರಕರಣದಿಂದ ಸಹಜವಾಗಿ ಜಾರಕಿಹೊಳಿ ಕುಟುಂಬದ ವರ್ಚಸ್ಸಿಗೆ ಧಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಆಗಿರುವ ಡ್ಯಾಮೇಜ್ ನ್ನು ಸರಿಪಡಿಸಲು ಪ್ರಯತ್ನಿಸುವುದಾಗಿ ಸತೀಶ್ ಜಾರಕಿಹೊಳಿ ಹೇಳಿದರು.

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp