5 ಕೋಟಿ ರೂ. ಗೆ ರಾಸಲೀಲೆ ಸಿಡಿ ಡೀಲ್; ಸಿಡಿ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡೋರನ್ನ ಏರೋಪ್ಲೇನ್ ಹತ್ತಿಸಿ: ಎಚ್ ಡಿಕೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ  ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. 

Published: 05th March 2021 01:23 PM  |   Last Updated: 05th March 2021 01:38 PM   |  A+A-


HD KumaraSwamy

ಎಚ್.ಡಿ ಕುಮಾರಸ್ವಾಮಿ

Posted By : Shilpa D
Source : Online Desk

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ  ಬಂದಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. 

ಮೈಸೂರಿನಲ್ಲಿಂದು ಮಾತನಾಡಿದ ಅವರು, ಕಳೆದು ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ ಇದ್ದಾರೆ. ಇದನ್ನ ತನಿಖೆ ಮಾಡಿಸುವ ಜವಾಬ್ದಾರಿ ಸರ್ಕಾರದ್ದು. ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ. ಸರ್ಕಾರ ಬೀಳಿಸಿದರು ಎನ್ನುವ ಕಾರಣಕ್ಕೆ ನಾನು ಒಂದು ಕಲ್ಲು ಹೊಡೆಯಬೇಕು ಅಂತ ಹೊಡೆಯೋದಿಲ್ಲ ಎಂದು ಹೇಳಿದ್ದಾರೆ. 

ರಾಜಕಾರಣಿಗಳ ಸಿಡಿ ಇದೆ ಎಂದು ಹೇಳಿ ಬ್ಲ್ಯಾಕ್ ಮೇಲ್ ಮಾಡುತ್ತಿರುವವರನ್ನು ಒದ್ದು ಎರೋಪ್ಲೇನ್ ಹತ್ತಿಸಿ. ಅವರನ್ನ ಬಂಧಿಸಿ ಅವರ ಬಳಿ ಇರುವ ಸಿಡಿಗಳನ್ನ ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಸಿಡಿ ಇದೆ ಎಂದು ಕೆಲವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಇದು ಬ್ಲ್ಯಾಕ್‌ಮೇಲ್‌ ಕಾರ್ಯತಂತ್ರ. ಇದಕ್ಕೆ ಪುಷ್ಠಿ ಕೊಟ್ಟು ಬೆಳಸಬೇಡಿ. ಅದ್ಯಾರೋ ಒಬ್ಬ ಮಾಜಿ ಸಿಎಂ ಅದೆಲ್ಲೋ ಹೋಗಿ ಬರುತ್ತಾರೆ. ಅದರ ಸಿಡಿ ನನ್ನ ಬಳಿ ಇದೆ ಎಂದು ಹೇಳುತ್ತಾನೆ. ರಾಜ್ಯದಲ್ಲಿ ದೇವೇಗೌಡ, ಎಸ್‌ಎಂ ಕೃಷ್ಣ ಹಾದಿಯಾಗಿ ತುಂಬಾ ಜನ ಇದ್ದಾರೆ. ಯಾರು ಆ ಮಾಜಿ ಸಿಎಂ ಎಂದು ಬಾಯಿ ಬಿಡಿಸಿ. ಸುಮ್ಮನೆ ನಾವು ಹೊರಗೆ ಓಡಾಡುವಾಗ ಮುಜುಗರ ತರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೆ ಅದ್ಯಾವುದೋ ಆಂಕರ್ ವಿಚಾರದಲ್ಲೂ ನನ್ನ ಹೆಸರು ತಂದರು. ಆಗಲು ಸರಿಯಾಗಿ ಜಾಡಿಸಿದ್ದೇ‌ನೆ. ನನಗೆ ಈ ವಿಚಾರದಲ್ಲಿ ಯಾವುದೇ ಭಯವು ಇಲ್ಲ. ಈ ಪ್ರಕರಣದಲ್ಲಿ ನಾನು ತುಂಬಾ ಕ್ಲೀನ್ ಆಗಿದ್ದೇನೆ. ಆದರೆ ನನ್ನ ಉದ್ದೇಶ ಇಂತಹ ಬ್ಲ್ಯಾಕ್ ಮೇಲ್‌ಗಳು ನಿಲ್ಲಬೇಕು. ಇಂತಹ ಪ್ರಕರಣಗಳು ಹೇಸಿಗೆ ಬರುವಂತ ಸ್ಥಿತಿ ನಿರ್ಮಾಣ ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp