ರಮೇಶ್ ಜಾರಕಿಹೊಳಿ ಸಿಡಿ ಬಾಂಬ್: 16 ಶಾಸಕರು ಕೋರ್ಟ್ ಮೆಟ್ಟಿಲೇರಲಿದ್ದೇವೆ- ಎಸ್.ಟಿ. ಸೋಮಶೇಖರ್
ನಾವು ಆರು ಜನ ಸಚಿವರು ಕೋರ್ಟ್ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್ಗೆ ಅರ್ಜಿ ಹಾಕುತ್ತಾರೆ. ಇಂದು ಅಥವಾ ಸೋಮವಾರ ಎಲ್ಲಾ 16 ಶಾಸಕರೂ ಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಹಕಾರ ಸಚಿವ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ.
Published: 06th March 2021 01:33 PM | Last Updated: 06th March 2021 01:42 PM | A+A A-

ಸೋಮಶೇಖರ್
ಬೆಂಗಳೂರು: ನಾವು ಆರು ಜನ ಸಚಿವರು ಕೋರ್ಟ್ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್ಗೆ ಅರ್ಜಿ ಹಾಕುತ್ತಾರೆ. ಇಂದು ಅಥವಾ ಸೋಮವಾರ ಎಲ್ಲಾ 16 ಶಾಸಕರೂ ಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಹಕಾರ ಸಚಿವ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು ‘ನಾವು ಮೈತ್ರಿ ಸರ್ಕಾರ ಕೆಡವಿದ್ದೇವೆ ಎಂಬ ಕೋಪ ಹಲವರಲ್ಲಿ ಇದೆ. ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ತಂದಿದ್ದೇವೆ ಎಂಬ ಸಿಟ್ಟಿದೆ. ಹೀಗಾಗಿ ನಮ್ಮ ವಿರುದ್ಧ ತೇಜೋವಧೆ ಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು. ನಾನು ಗೃಹಮಂತ್ರಿ ಜೊತೆ ಸಹ ಮಾತನಾಡಿದ್ದೇನೆ. ಈ ಪ್ರಕರಣ ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.
ತನ್ನನ್ನು ಇದುವರೆಗೂ ಯಾರು ಬ್ಲಾಕ್ ಮೇಲ್ ಮಾಡಿಲ್ಲ. ಇಷ್ಟು ವರ್ಷ ರಾಜಕಾರಣದ ಮಾಡಿಕೊಂಡು ಬಂದಿದ್ದೇವೆ. ಆದರೆ ಕ್ಷಣ ಮಾತ್ರದಲ್ಲಿ ಟಿವಿಯಲ್ಲಿ ಏನೋ ಸುದ್ದಿ ಬಿತ್ತರಗೊಂಡರೆ ಹೇಗೆ?. ಆದ್ದರಿಂದ ಯಾವುದೇ ರೀತಿಯಲ್ಲಿ ನಮ್ಮ ತೇಜೋವಧೆ ಆಗಬಾರದು ಎಂಬ ಕಾರಣಕ್ಕೆ ನಾವುಗಳು ಕೋರ್ಟ್ ಗೆ ಹೋಗಿದ್ದೇವೆ ಎಂದು ಸ್ಪಷ್ಟಪಡಿಸಿದರು.