ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

ಸೆಕ್ಸ್ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿರುವ ಕರ್ನಾಟಕದ 6 ಸಚಿವರ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಅನವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

Published: 06th March 2021 12:41 PM  |   Last Updated: 06th March 2021 12:54 PM   |  A+A-


Sadananda Gowda

ಡಿವಿ ಸದಾನಂದಗೌಡ

Posted By : Srinivasamurthy VN
Source : Online Desk

ಬೆಂಗಳೂರು: ಸೆಕ್ಸ್ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿರುವ ಕರ್ನಾಟಕದ ಸಚಿವರ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಅನವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

ರಮೇಶ್ ಜಾರಿಕಿಹೊಳಿ ಅವರ ಸೆಕ್ಸ್ ಸಿಡಿ ವಿಚಾರ ಮಾಧ್ಯಮಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ಘಟನೆಯ ಬಳಿಕ ಇನ್ನೂ 6 ಸಚಿವರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಯಾವುದೇ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೋರಿ ಕೋರ್ಟ್​ಗೆ ಅರ್ಜಿ ಹಾಕಿದ್ದಾರೆ. ಸಚಿವರ ಈ ನಡೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಸಚಿವರ ನಡೆಗೆ ಸ್ವಪಕ್ಷೀಯರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು, 6 ಸಚಿವರು ಕೋರ್ಟ್​ಗೆ ಹೋಗಿರೋದು ಅವರವರ ವೈಯಕ್ತಿಕ ವಿಚಾರ. ಆದರೆ, ಅನವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ. 

'ಮುಂದಿನ ಸಾಧಕ ಬಾಧಕಗಳನ್ನು ಅರಿತು ಕೋರ್ಟ್ ಮೊರೆ ಹೋಗಿರೋದು ಅವರವರ ವೈಯಕ್ತಿಕ. 6 ಸಚಿವರು ಕೋರ್ಟ್​ಗೆ ಹೋಗಿರೋದು ಅವರವರ ವೈಯಕ್ತಿಕ ವಿಚಾರ. ಆದರೆ, ಅನಾವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ. ಕೋರ್ಟ್ ಗೆ ಹೋಗಿ ವಿಚಾರವನ್ನು ಗೋಜಲು ಮಾಡಿಕೊಳ್ಳೋದು ನನ್ನ ಪ್ರಕಾರ ಸರಿಯಲ್ಲ ಎಂದು ಸಚಿವ ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, 'ಸಿಡಿ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಮುಜುಗರವಾಗಿದೆ. ರಾಜಕೀಯದಲ್ಲಿ ಈ ರೀತಿಯ ಸಿಡಿಗಳು ತನ್ನದೇ ಆದ ಪ್ರಭಾವ ಬೀರುತ್ತವೆ. ಟೆಕ್ನಾಲಜಿ ಬಹಳ ಮುಂದುವರೆದಿದ್ದು, ಯಾರು ಏನು ಬೇಕಾದರೂ ಮಾಡಬಹುದು. ಆದರೆ, ಇದು ಸತ್ಯವೋ ಸುಳ್ಳೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇಂತಹ ವಿಚಾರ ಬಂದಾಗ ಸೂಕ್ಷ್ಮವಾಗಿರಬೇಕು. ಆಡಳಿತಕ್ಕೂ ಇದರಿಂದ ತೊಂದರೆಯಾಗಲಿದೆ. ಕೇಂದ್ರದಿಂದ ಅದೇ ದಿನ ವರದಿ ಕೂಡ ಕೇಳಿದ್ದರು. ಬಹಳ ವಿಚಾರಗಳು ನಮಗೂ ಗೊತ್ತಿರಲಿಲ್ಲ. ನಾವು‌ ಮಾಧ್ಯಮದ ವರದಿಯನ್ನು ಆಧರಿಸಿ ಒಂದಿಷ್ಟು ಮಾಹಿತಿ ನೀಡಿದ್ದೇವೆ. ಸ್ವಾಭಾವಿಕವಾಗಿ ಇಂತಹ ಆರೋಪ ಬಂದಾಗ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಬೇಕು ಎಂದು ಹೇಳಿದ್ದಾರೆ. 

 ಎಲ್ಲರೂ ನೈತಿಕತೆಯಿಂದ ಇರಬೇಕು. ಆರೋಪ ಎದುರಿಸುತ್ತಿರುವವರು ಅಧಿಕಾರದಿಂದ ದೂರ ಉಳಿದು ತನಿಖೆಗೆ ಸಹಕರಿಸಬೇಕು. ಪಕ್ಷ ಇದೆಲ್ಲವನ್ನೂ ಗಮನಿಸಿದ ಕಾರಣದಿಂದಲೇ ನಾವು ರಾಜೀನಾಮೆ ಕೊಡಿಸಿದ್ದು. ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿಗೆ ಎಲ್ಲಾ ಮಾಹಿತಿಯನ್ನು ನೀಡಿದ್ದೇವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.

ಸಿಟಿ ಸಿವಿಲ್ ಕೋರ್ಟ್​ನಲ್ಲಿ 6 ಸಚಿವರು ಅರ್ಜಿ ಹಾಕಿದ್ದು, ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ ಹೋದ ಸಚಿವರಾದ ಶಿವರಾಮ್ ಹೆಬ್ಬಾರ್, ಎಸ್​.ಟಿ ಸೋಮಶೇಖರ್​, ನಾರಾಯಣ ಗೌಡ, ಭೈರತಿ ಬಸವರಾಜ್​, ಬಿ.ಸಿ ಪಾಟೀಲ್​, ಡಾ. ಕೆ. ಸುಧಾಕರ್​​ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ ಮೊರೆ ಹೋಗಿದ್ದಾರೆ. 67 ಸುದ್ದಿ ಸಂಸ್ಥೆಗಳನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿಯನ್ನು 68ನೇ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಇನ್ನೂ ಕೆಲವು ರಾಜಕಾರಣಿಗಳ ಸಿಡಿ ಬಿಡುಗಡೆಯ ಸಾಧ್ಯತೆ ಬಗ್ಗೆ ಹೇಳಿಕೆ ನೀಡಿದ್ದ ರಾಜಶೇಖರ್ ಮುಲಾಲಿ ಅವರನ್ನು ಕೂಡ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಜೊತೆಗೆ, ಫೇಸ್ ಬುಕ್, ಟ್ವಿಟರ್, ವಾಟ್ಸಾಪ್, ಯೂಟ್ಯೂಬ್ ಅನ್ನು ಸಹ ಸಚಿವರ ಪರ ವಕೀಲರು ಪ್ರತಿವಾದಿಯನ್ನಾಗಿ ಮಾಡಿದ್ದಾರೆ.
 

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp