ಸಿದ್ದರಾಮಯ್ಯ ವಿರುದ್ಧ ಘೋಷಣೆ: ಮೈಸೂರಿನ 6 ಮಂದಿ ಕಾಂಗ್ರೆಸ್ ಕಾರ್ಯಕರ್ತರ ಉಚ್ಛಾಟನೆ 

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದ ಆರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

Published: 07th March 2021 07:49 AM  |   Last Updated: 07th March 2021 07:49 AM   |  A+A-


Siddaramaiah

ಸಿದ್ದರಾಮಯ್ಯ

Posted By : Sumana Upadhyaya
Source : The New Indian Express

ಮೈಸೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದ ಆರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಇತ್ತೀಚೆಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಶಾಸಕ ತನ್ವೀರ್ ಸೇಠ್ ರೊಂದಿಗೆ ಭಿನ್ನಾಭಿಪ್ರಾಯ ಕಾಣಿಸಿಕೊಂಡು ಸಿಟ್ಟುಗೊಂಡಿರುವ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಲು ಈ ರೀತಿ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಮೈಸೂರು ನಗರ ಕಾಂಗ್ರೆಸ್ ಸಮಿತಿ ಸದಸ್ಯರು ಪಕ್ಷದಿಂದ ಕಾರ್ಯಕರ್ತರನ್ನು ಉಚ್ಛಾಟಿಸಿರುವ ಬಗ್ಗೆ ಮೌನವಹಿಸಿದ್ದಾರೆ.

ಕಳೆದ ತಿಂಗಳು ಮೈಸೂರು ಮಹಾನಗರ ಪಾಲಿಕೆ ಚುನಾವಣೆ ನಡೆದ ಬಳಿಕ ಕಾಂಗ್ರೆಸ್ ನೊಳಗಿರುವ ಭಿನ್ನಮತ ಹೊರಗೆ ಬಂದಿತ್ತು. ಕಾಂಗ್ರೆಸ್ ಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ ಎಂಬುದು ಕೆಲವು ನಾಯಕರ ಆರೋಪ. ಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮೇಯರ್ ಸ್ಥಾನ ಜೆಡಿಎಸ್ ಪಾಲಾದರೆ ಕಾಂಗ್ರೆಸ್ ಉಪ ಮೇಯರ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ತನ್ವೀರ್ ಸೇಠ್ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದು ಪಕ್ಷ ಅವರಿಗೆ ನೊಟೀಸ್ ಜಾರಿಮಾಡಬೇಕೆಂದು ಸಿದ್ದರಾಮಯ್ಯ ಮತ್ತು ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಈ ಘಟನೆ ಬಳಿಕ ಮೈಸೂರು ಕಾಂಗ್ರೆಸ್ ನಲ್ಲಿ ಅಸಮಾಧಾನ, ಭಿನ್ನಮತ ಇನ್ನಷ್ಟು ಹೊಗೆಯಾಡುತ್ತಿತ್ತು. ಸಿದ್ದರಾಮಯ್ಯ ಬೆಂಬಲಿಗರು ತನ್ವೀರ್ ಸೇಠ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿದ್ದರು. ಬಳಿಕ ಎಐಸಿಸಿ ವೀಕ್ಷಕರೊಬ್ಬರನ್ನು ಮೈಸೂರಿಗೆ ಪರಿಸ್ಥಿತಿ ಪರಾಮರ್ಶಿಸಲು ಕಳುಹಿಸಲಾಗಿತ್ತು. ತನ್ವೀರ್ ಸೇಠ್ ಅವರಿಗೆ ಸಹ ನೊಟೀಸ್ ಜಾರಿ ಮಾಡಲಾಗಿತ್ತು.

ಇದು ತನ್ವೀರ್ ಸೇಠ್ ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿತ್ತು. ಅವರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದರು.ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ತೀರ್ಮಾನ ತೆಗೆದುಕೊಂಡಿದ್ದು ಎಂದು ಸಮರ್ಥನೆ ನೀಡಿದ್ದರು. ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಆರ್ ಮೂರ್ತಿ ಅವರು ಶಾಹಿದ್, ಎಂ ಎನ್ ಲೋಕೇಶ್, ಅಬೀಬ್ ಮತ್ತು ಅವರ ಇಬ್ಬರು ಪುತ್ರರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

ಈ ಆರು ಮಂದಿ ತನ್ವೀರ್ ಸೇಠ್ ಅವರ ನಿಕಟವರ್ತಿಗಳಾಗಿದ್ದಾರೆ. ಉಚ್ಛಾಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಯತೀಂದ್ರ, ಎಐಸಿಸಿ ವೀಕ್ಷಕರು ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ವರದಿ ಕಳುಹಿಸಿದ್ದಾರೆ. ವರದಿಯ ಪ್ರಕಾರ ಅವರು ತಪ್ಪಿತಸ್ಥರೆಂದು ಸಾಬೀತಾದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು. 

 


Stay up to date on all the latest ರಾಜಕೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp