ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುರ್ತು ಸುದ್ದಿಗೋಷ್ಠಿ: ಹಲವು ವಿಷಯಗಳು ಬಹಿರಂಗ?

ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. 

Published: 09th March 2021 08:17 AM  |   Last Updated: 09th March 2021 12:21 PM   |  A+A-


Ramesh jarkiholi

ರಮೇಶ್ ಜಾರಕಿಹೊಳಿ

Posted By : Shilpa D
Source : The New Indian Express

ಬೆಂಗಳೂರು: ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. 

ಸಿಡಿ ಪ್ರಕರಣದ ನಂತರ ಮೊದಲ ಬಾರಿ ಮಾಧ್ಯಮಗಳ ಮುಂದೆ ಕಾಣಿಸಲಿರುವ ಮಾಜಿ ಸಚಿವರ ಈ ಸುದ್ದಿಗೋಷ್ಯಿಯಲ್ಲಿ ಯಾವ ವಿಷಯ ಬಹಿರಂಗ ಪಡಿಸಲಿದ್ದಾರೆ ಎಂಬುದು ಎಲ್ಲರಲ್ಲೂ ಕುತೂಹೂಲ ಮೂಡಿಸಿದೆ.

ಸಿಡಿ ಬಹಿರಂಗವಾದ ಬಳಿಕ ರಾಜೀನಾಮೆ ನೀಡಿದ್ದ ರಮೇಶ್‌ ನಂತರ ಮಾಧ್ಯಮಗಳಿಂದ ದೂರ ಉಳಿದಿದ್ದರು. ಇದೀಗ ಅಜ್ಞಾತ ಸ್ಥಳದಿಂದ ಆಚೆ ಬಂದು ಬೆಳಗ್ಗೆ 10.30ಕ್ಕೆ  ಸದಾಶಿವನಗರದ ಮನೆಯಲ್ಲಿ  ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದವರು ರಮೇಶ್​ ಜಾರಕಿಹೊಳಿ. ಸರ್ಕಾರದಲ್ಲಿ ಪ್ರಭಾವಿ ಖಾತೆ ಪಡೆಯುವ ಮೂಲಕ ಬಿಜೆಪಿ ಸರ್ಕಾರದಲ್ಲಿ ಶಕ್ತಿ ಹೆಚ್ಚಿಸಿಕೊಂಡಿದ್ದ ರಮೇಶ್​ ಜಾರಕಿಹೊಳಿ ಈಗ ಮಾಜಿ ಸಚಿವರು. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp