ಸೋಮಶೇಖರ್ ಅವರೇ, ಬಾಂಬೆ ಹೋಟೆಲ್ ನಲ್ಲಿ ಕ್ವಾರೆಂಟೈನ್ ಆಗಿದ್ದಿರಲ್ಲ ಆಗ ನಿಮ್ಮ ಸಿಡಿ ಮಾಡಿದ್ದು ಯಾರು?
ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಬಹಿರಂಗಗೊಳಿಸಿರುವವರು ಕಾಂಗ್ರೆಸ್ ನವರು ಎಂದು ಆರೋಪಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಪ್ರದೇಶ ಕಾಂಗ್ರೆಸ್ ಸಮಿತಿ...
Published: 10th March 2021 02:43 PM | Last Updated: 10th March 2021 02:43 PM | A+A A-

ಸಚಿವ ಎಸ್ ಟಿ ಸೋಮಶೇಖರ್
ಬೆಂಗಳೂರು: ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಬಹಿರಂಗಗೊಳಿಸಿರುವವರು ಕಾಂಗ್ರೆಸ್ ನವರು ಎಂದು ಆರೋಪಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಟ್ವೀಟರ್ ನಲ್ಲಿ ತಿರುಗೇಟು ನೀಡಿದೆ.
ಸಿಡಿ ಮಾಡಿದ್ದು ಕಾಂಗ್ರೆಸ್ ನವರೇ, ನಾನೂ ಕಾಂಗ್ರೆಸ್ ನಲ್ಲಿದ್ದವನೇ ಎಂದಿರುವ ಸಚಿವ ಎಸ್ ಟಿ ಸೋಮಶೇಖರ್ ಅವರೇ. ನೀವೆಷ್ಟು ಸಿಡಿ ಮಾಡಿದ್ದೀರಿ? ನಿಮ್ಮದೆಷ್ಟು ಸಿಡಿ ಇದೆ? ಅದಕ್ಕೆಷ್ಟು ಖರ್ಚು ಮಾಡಿದ್ದೀರಿ? ಬಾಂಬೆಯ ಹೋಟೆಲ್ ನಲ್ಲಿ ಕ್ವಾರೆಂಟೈನ್ ಆಗಿದ್ದಿರಲ್ಲ ಆಗ ನಿಮ್ಮ ಸಿಡಿ ಯಾರು ಮಾಡಿದ್ದು? ಕೋರ್ಟಿಗೆ ಏಕೆ ಅರ್ಜಿ ಏಕೆ ಸಲ್ಲಿಸಿದಿರಿ? ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಟ್ವೀಟರ್ ನಲ್ಲಿ ಪ್ರಶ್ನಿಸಿದೆ.
ಕಾಂಗ್ರೆಸ್ ವಿರುದ್ದ ಆರೋಪಿಸುವ ಸೋಮಶೇಖರ್ ಅವರೇ ನಿಮ್ಮ ಕಳ್ಳ ಮನಸೇಕೆ ಹುಳ್ಳುಳ್ಳಗೆ ಆಡುತ್ತಿದೆ? ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡವರಂತೆ ಓಡಿ ಹೋಗಿ ತಡೆಯಾಜ್ಞೆಗೆ ನ್ಯಾಯಾಲಯದಲ್ಲಿ ಅರ್ಜಿ ಏಕೆ ಸಲ್ಲಿಸಿದಿರಿ? ಎಂದು ಕೇಳಿದೆ.
ಮನೆಹಾಳು ಕೆಲಸ ಯಾರು ಮಾಡುವವರು ಎಂಬುದನ್ನು ನಿಮ್ಮದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಲ್ಲಿ ವಿಚಾರಿಸಿ, ಅವರು ಹೇಳುತ್ತಾರೆ. ಬಿ.ವೈ ವಿಜಯೇಂದ್ರ ಅವರು ಸಿಡಿ ತಯಾರಿಕಾ ಘಟಕವನ್ನು ಹೊಂದಿರುವ ಬಗ್ಗೆ ಗಂಟಾ ಘೋಷವಾಗಿ ಹೇಳಿದ್ದಾರೆ. ಬಿಜೆಪಿಯನ್ನು ಬ್ಲಾಕ್ ಮೇಲ್ ಜನತಾ ಪಾರ್ಟಿ ಎಂದು ನಿಮ್ಮವರೇ ಸಾರಿ ಸಾರಿ ಹೇಳಿದ್ದಾರೆ ಎಂದು ತಿರುಗೇಟು ನೀಡಿದೆ.