ಸೋನಿಯಾ ಗಾಂಧಿ ವಿರುದ್ಧದ ದೂರು ಕ್ಲೋಸ್ ಮಾಡಿ: ಸಿಎಂ ಗೆ ಡಿಕೆ ಶಿವಕುಮಾರ್ ಒತ್ತಾಯ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಕೇಸ್ ಕ್ಲೋಸ್ ಮಾಡಿ ಬಿ ರಿಪೋರ್ಟ್ ಹಾಕುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

Published: 15th March 2021 11:12 AM  |   Last Updated: 15th March 2021 11:12 AM   |  A+A-


sonia gandhi

ಸೋನಿಯಾ ಗಾಂಧಿ

Posted By : Shilpa D
Source : The New Indian Express

ಶಿವಮೊಗ್ಗ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಕೇಸ್ ಕ್ಲೋಸ್ ಮಾಡಿ ಬಿ ರಿಪೋರ್ಟ್ ಹಾಕುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಪಕ್ಷದ ಅಧಿಕೃತ ಟ್ವಿಟ್ಟರ್ ನಲ್ಲಿ ಪಿಎಂ ಕೇರ್ಸ್ ಫಂಡ್ ದುರುಪಯೋಗ ಆಗುತ್ತಿರುವ ಬಗ್ಗೆ  ಟ್ವೀಟ್ ಮಾಡಲಾಗಿತ್ತು, ಈ ಸಂಬಂಧ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲಾಗಿತ್ತು. ಕೇಸ್ ದಾಖಲಾದ ಮರು ದಿನ ಯಡಿಯೂರಪ್ಪ ಭರವಸೆ ನೀಡಿದ್ದರು. ಮೂರು ತಿಂಗಳಾಗ ನಂತರ ಬಿ ರಿಪೋರ್ಟ್ ಹಾಕಿ ಕೇಸ್ ಕ್ಲೋಸ್ ಮಾಡಿಸುವುದಾಗಿ ಹೇಳಿದ್ದರು ಆದರೆ ಇದುವರೆಗೂ ಏನೂ ಆಗಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.

ಸಾಗರದಲ್ಲೊಬ್ಬ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ವಿರುದ್ಧ ನೀಡಿದ ದೂರು ಮೇಲೆ ಎಫ್‌ಐಆರ್‌ ಹಾಕಿದ ಎಸ್ಪಿ ಶಾಂತರಾಜು, ಈಗ ಸಂಗಮೇಶ್‌ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಿರುದ್ಧವೆ ಕೇಸು ಹಾಕಿದವರಿಗೆ ನಮ್ಮಂತವರು ಲೆಕ್ಕಕ್ಕಿಲ್ಲಬಿಡಿ. ಆದರೆ, ಇದು ಬಹಳ ದಿನ ನಡೆಯುವುದಿಲ್ಲ. ಯಾವ ಪಕ್ಷಕ್ಕೂ ಅಧಿಕಾರ ಶಾಶ್ವತವಲ್ಲ. ರಾತ್ರಿ ಬೆಳಗಾಗುವುದರೊಳಗೆ ಅಧಿಕಾರ ಬದಲಾಗುತ್ತದೆ. ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದರಿಂದ ಸ್ಟಾರ್‌ ಕೊಡುವುದಿಲ್ಲಎನ್ನುವುದನ್ನು ಎಸ್ಪಿ ಶಾಂತರಾಜು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಕೆ ಮಾತುಗಳನ್ನಾಡಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹೆಸರಿನ ಟ್ವಿಟ್ಟರ್‌ ಖಾತೆಯಲ್ಲಿ ಪಿಎಂ ಕೇರ್ಸ್‌ ನಿಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದಾರೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ 2020 ರ ಮೇ ತಿಂಗಳಿನಲ್ಲಿ ಸಾಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. 

ಬಿಜೆಪಿಯವರಿಗೆ ಅಧಿಕಾರ ಶಾಶ್ವತ ಅಲ್ಲ. ಶಿವಮೊಗ್ಗದಲ್ಲಿ ಏಳಕ್ಕೆ ಏಳು ಕಾಂಗ್ರೆಸ್ ಗೆಲ್ಲಲಿದೆ. ಹಾಸಿಗೆ ದಿಂಬಿನಲ್ಲೇ ಹಣ ಹೊಡೆಯುತ್ತಿದ್ದಾರೆ. ಲೂಟಿ ಹೊಡೆಯುವುದೇ ಇವರ ಕೆಲಸವಾಗಿದೆ. ಯಾವನೋ ದೂರು ನೀಡಿದ್ದಕ್ಕೆ ಸೋನಿಯಾ ಗಾಂಧಿ ಮೇಲೆ ಸುಳ್ಳು ಕೇಸು ಹಾಕಿದ್ದರು. ಈವರೆಗೆ ಬಿ ರಿಪೋರ್ಟ್ ಹಾಕಿಲ್ಲ. 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಪಿಎಂ ಕೇರ್ಸ್ ನಿಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ದಾಖಲಿಸಿದ ಸಂಬಂಧ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ವಕೀಲ ಕೆ.ವಿ. ಪ್ರವೀಣ್ ಕುಮಾರ್ ನೀಡಿರುವ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿತ್ತು.

‘ಸೋನಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪಿ.ಎಂ. ಕೇರ್ಸ್ ನಿಧಿಗೆ ಸಂದಾಯವಾಗುತ್ತಿರುವ ಹಣ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ ಎಂದು ಪ್ರಕಟಿಸಿದ್ದಾರೆ. ಈ ಸಂದೇಶ ನಾಗರಿಕರಲ್ಲಿ ಅಪನಂಬಿಕೆ ಹುಟ್ಟಿಸಿ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರವಾಗಿದೆ’ ಎಂದು ದೂರಿನಲ್ಲಿ ಹೇಳಲಾಗಿದೆ.


Stay up to date on all the latest ರಾಜಕೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp