ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್'ಗೆ ರಾಜೀನಾಮೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಿಂಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

Published: 21st March 2021 08:26 AM  |   Last Updated: 21st March 2021 08:26 AM   |  A+A-


Nalin Kumar Kateel

ನಳಿನ್ ಕುಮಾರ್ ಕಟೀಲ್

Posted By : Manjula VN
Source : The New Indian Express

ಮಸ್ಕಿ: ಕಾಂಗ್ರೆಸ್ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಿಂಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಸಿದ್ದರಾಮಯ್ಯ ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದು, ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿರುವುದಾಗಿ ತಿಳಿಸಿ ವ್ಯಂಗ್ಯವಾಡಿದ್ದಾರೆ. 

ಉಪಚುನಾವಣೆಯಲ್ಲಿ ಬಿಜೆಪಿ ಪಂಚಜನ್ಯ ಗಹಳೆ ಮೊಳಗಿಸಿದ್ದು, ಉಪಕದನದಲ್ಲಿ ಸಿಎಂ ಯಡಿಯೂರಪ್ಪ ಕೃಷ್ಣರಂತೆ ಸಾರಥಿಯಾಗಿದ್ದಾರೆ. ಬಿ.ವೈ.ವಿಜಯೇಂದ್ರ ಅರ್ಜುನರಾಗಿದ್ದಾರೆ. ಶ್ರೀರಾಮುಲು ಭೀಮರಾಗಿದ್ದು, ಎನ್.ರವಿಕುಮಾರ ಸಹದೇವರಾಗಿದ್ದಾರೆ. ಈ ಕುರುಕ್ಷೇತ್ರದಲ್ಲಿ ಪಾಂಡವರಿಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Stay up to date on all the latest ರಾಜಕೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp