ಮೇ 2ರ ನಂತರ  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ; ಯತ್ನಾಳ್

ಐದು ರಾಜ್ಯಗಳಲ್ಲಿ ನಡೆಯುತ್ತಿರುವ  ವಿಧಾನಸಭೆ ಚುನಾವಣೆ ಕೊನೆಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ

Published: 21st March 2021 07:54 PM  |   Last Updated: 21st March 2021 07:54 PM   |  A+A-


ಬಸನಗೌಡ ಯತ್ನಾಳ್

Posted By : Srinivas Rao BV
Source : UNI

ವಿಜಯಪುರ: ಐದು ರಾಜ್ಯಗಳಲ್ಲಿ ನಡೆಯುತ್ತಿರುವ  ವಿಧಾನಸಭೆ ಚುನಾವಣೆ ಕೊನೆಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿಯುವ  ಮೂಲಕ ರಾಜ್ಯ ಸರ್ಕಾರದಲ್ಲಿ  ನಾಯಕತ್ವ ಬದಲಾವಣೆ ಸಂಬಂಧ ಮತ್ತೊಂದು ಗಡುವು ನಿಗದಿಪಡಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ  ಮಾತನಾಡುತ್ತಿದ್ದ  ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್‌ಶಾ ಹಾಗೂ ಪಕ್ಷದ ಕೇಂದ್ರ ವರಿಷ್ಟರು ಈ ಸಂಬಂಧ ತೀರ್ಮಾನ ಕೈಗೊಳ್ಳಲಿದ್ದಾರೆ. ಎಂಬ ಮಾಹಿತಿ ತಮಗೆ ದೊರೆತಿದೆ ಎಂದು ಹೇಳಿದ್ದಾರೆ. 

ಉತ್ತರ ಕರ್ನಾಟಕದ ನಾಯಕರೊಬ್ಬರು  ಮುಂದಿನ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.


Stay up to date on all the latest ರಾಜಕೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp