ಮಸ್ಕಿ ಕ್ಷೇತ್ರದ ಅಭಿವೃದ್ಧಿಗೆ ಉಪ ಚುನಾವಣೆ ಮುಹೂರ್ತವೇ?: ಸಿಎಂ ಯಡಿಯೂರಪ್ಪಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು 

ಕ್ಷೇತ್ರಗಳ ಪ್ರಗತಿಗೆ ಚುನಾವಣೆ, ಉಪ ಚುನಾವಣೆ ಮುಹೂರ್ತವೇ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಪ್ರಶ್ನಿಸಿದ್ದಾರೆ.

Published: 22nd March 2021 09:58 AM  |   Last Updated: 22nd March 2021 12:45 PM   |  A+A-


H D Kumaraswamy

ಹೆಚ್ ಡಿ ಕುಮಾರಸ್ವಾಮಿ

Posted By : Sumana Upadhyaya
Source : Online Desk

ಬೆಂಗಳೂರು: ಕ್ಷೇತ್ರಗಳ ಪ್ರಗತಿಗೆ ಚುನಾವಣೆ, ಉಪ ಚುನಾವಣೆ ಮುಹೂರ್ತವೇ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಪ್ರಶ್ನಿಸಿದ್ದಾರೆ.

ಮಸ್ಕಿ ಕ್ಷೇತ್ರದ ಅಭಿವೃದ್ದಿ ಬಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಹೆಚ್ ಡಿ ಕುಮಾರಸ್ವಾಮಿ, ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗದಿಂದ ಬಿಎಸ್‌ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈವರೆಗೆ ಮಸ್ಕಿಯಲ್ಲಿ ಆಗದಿರುವ ಅಭಿವೃದ್ಧಿ ಈಗ ಉಪ ಚುನಾವಣೆ ಸಮಯದಲ್ಲಿ ಆಗುತ್ತದೆಯೇ ಎಂದು ಕೇಳಿದರು.

ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ವರ್ಷದ ಹಿಂದೆಯೇ ಚುನಾವಣೆಗಳಾದ 'ಬಾಂಬೆ ತಂಡ'ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಕೇವಲ ಬೂಟಾಟಿಕೆಯದ್ದು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ 'ಏಕಗವಾಕ್ಷಿ' ಆಡುವ ಮಾತುಗಳಿಗೆ ಜನ ಮನ್ನಣೆ ನೀಡಬಾರದು ಎಂದು ಕೇಳಿಕೊಂಡಿದ್ದಾರೆ.


Stay up to date on all the latest ರಾಜಕೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp