ಬೆಳಗಾವಿ ಲೋಕಸಭೆ ಚುನಾವಣೆ: ಇನ್ನೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಹೈ ವೋಲ್ಟೇಜ್ ಕದನ ಎಂದೇ ಪರಿಗಣಿತವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಸಸ್ಪೆನ್ಸ್ ಆಗಿಯೇ ಉಳಿದಿದೆ.

Published: 23rd March 2021 08:55 AM  |   Last Updated: 23rd March 2021 12:20 PM   |  A+A-


Sathish Jarkiholi

ಸತೀಶ್ ಜಾರಕಿಹೊಳಿ

Posted By : Shilpa D
Source : The New Indian Express

ಬೆಳಗಾವಿ: ಹೈ ವೋಲ್ಟೇಜ್ ಕದನ ಎಂದೇ ಪರಿಗಣಿತವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಸಸ್ಪೆನ್ಸ್ ಆಗಿಯೇ ಉಳಿದಿದೆ.

ಮಾರ್ಚ್ 25 ಅಥವಾ 26 ರಂದು ಪಕ್ಷದ ಅಭ್ಯರ್ಥಿ ಯಾರು ಎಂದು ಘೋಷಿ,ಸಲಾಗುತ್ತದೆ ಎಂದು ಕೆಪಿಸಿಸಿಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಅಭ್ಯರ್ಥಿ ಹೆಸರು ಘೋಷಣೆ ವಿಳಂಬ ವಿಚಾರವಾಗಿ ಮಾತನಾಡಿ, ರಾಜಕೀಯದಲ್ಲಿ ವ್ಯತ್ಯಾಸಗಳು ಇರುತ್ತವೆ. ಅವುಗಳನ್ನು ಸರಿ ಪಡಿಸಬೇಕಾಗುತ್ತದೆ. ಆದ್ದರಿಂದ ಹೆಸರು ಘೋಷಣೆ ಮಾಡಿಲ್ಲ. ಬಿಜೆಪಿ ಪಕ್ಷದವರಿಗೆ ಎಲ್ಲ ಸಿದ್ಧವಿದೆ. ಆದರೂ ಸಹ ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ. ಇನ್ನೂ ಸಮಯವಿದೆ. ಮಾರ್ಚ್ 25 ಅಥವಾ 26ರೊಳಗಾಗಿ ಮಾಡಲಾಗುತ್ತದೆ ಎಂದರು.

ಸಿಡಿ ಪ್ರಕರಣ ಉಪ ಚುನಾವಣೆಗೆ ಪ್ಲಸ್ ಆಗುವುದಿಲ್ಲ, ಮೈನಸ್ ಕೂಡಾ ಆಗುವುದಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಏನು ಕೆಲಸಗಳಾಗಿವೆ. ಬಿಜೆಪಿ ಏನು ಕೆಲಸಗಳನ್ನು ಮಾಡಿದ್ದಾರೆ ಎನ್ನುವುದರ ಮೇಲೆ ಚುನಾವಣೆ ನಡೆಯಲಿದೆ. ಜನರು ಸಹ ಜಾಗೃತರಾಗಿದ್ದು, ಕೆಲಸಗಳನ್ನು ನೋಡಿ ಮತಗಳನ್ನು ನೀಡುತ್ತಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಉಪ ಚುನಾವಣೆಗೆ ಅಭ್ಯರ್ಥಿ ಹೆಸರು ಘೋಷಣೆ ಬಳಿಕ ಗೆಲುವಿಗೆ ತಂತ್ರಗಳನ್ನು ಮಾಡಲಾಗುತ್ತದೆ. ಚುನಾವಣಾ ಪ್ರಚಾರಕ್ಕೆ ಕೇಂದ್ರ ನಾಯಕರು ಯಾರೂ ಸಹ ಬರುವುದಿಲ್ಲ. ರಾಜ್ಯ ನಾಯಕರು ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನನ್ನ ಹೆಸರು ಕೇಳಿ ಬಂದಿದೆ. ಕೇಂದ್ರಕ್ಕೆ ಮೂವರು ಹೆಸರುಗಳನ್ನು ಕಳಿಸಲಾಗಿದೆ.

ದೆಹಲಿಯಿಂದ ಬುಲಾವ್ ಬಂದಿದ್ದು, ನಾಳೆ ಬೆಂಗಳೂರಿಗೆ ಹೋಗಿ, ಅಲ್ಲಿಂದ ದೆಹಲಿಗೆ ತೆರಳಲಿದ್ದೇನೆ. ಚುನಾವಣೆಗೆ ಸ್ಪರ್ಧಿಸಲು ನನ್ನ ಆಸಕ್ತಿಗಿಂತ, ಹೈಕಮಾಂಡ್ ನಿರ್ಧಾರ ಮುಖ್ಯವಾಗಿರುತ್ತದೆ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳಲಿದೆ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದರು. ಉಪ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಟಾರ್ಗೆಟ್ ಮಾಡಿ ಜನರಿಗೆ ತಿಳಿಸುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.


Stay up to date on all the latest ರಾಜಕೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp