ಬೆಳಗಾವಿ ಲೋಕಸಭಾ ಉಪಚುನಾವಣೆ: ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ

ಮಾಜಿ ಕೇಂದ್ರ ಸಚಿವ ಹಾಗೂ ದಿವಂಗತ ಸುರೇಶ ಅಂಗಡಿ ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರಿಗೆ ಬೆಳಗಾವಿ ಲೋಕಸಭೆ ಚುನಾವಣೆಯ ಬಿಜೆಪಿ ಟಿಕೆಟ್‌ ಘೋಷಣೆ ಮಾಡಲಾಗಿದೆ.

Published: 25th March 2021 10:28 PM  |   Last Updated: 26th March 2021 12:18 PM   |  A+A-


Mangala Angadi

ಮಂಗಳಾ ಸುರೇಶ್‌ ಅಂಗಡಿ

Posted By : Srinivasamurthy VN
Source : UNI

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ದಿವಂಗತ ಸುರೇಶ ಅಂಗಡಿ ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರಿಗೆ ಬೆಳಗಾವಿ ಲೋಕಸಭೆ ಚುನಾವಣೆಯ ಬಿಜೆಪಿ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಸುರೇಶ ಅಂಗಡಿ ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ಈ ಹಿಂದೆ ಹಾಲಿ ಮೋದಿ ಸರ್ಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್‌–19 ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರ ತೆರವಾಗಿತ್ತು.

ಸಾಕಷ್ಟು ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದರೂ ಅಂಗಡಿ ಅವರ ಕುಟುಂಬ ಸದಸ್ಯರಿಗೇ  ಪಕ್ಷ ಆದ್ಯತೆ ನೀಡಿದೆ. ಈ ಹಿಂದೆಯೇ ಬಿಜೆಪಿ ನಾಯಕರು ಮಂಗಳಾ ಅಂಗಡಿ ಅವರಿಗೆ ಟಿಕೆಟ್ ನೀಡುವ ಕುರಿತು ಒಲವು ತೋರಿದ್ದರು. ಸುರೇಶ್ ಅಂಗಡಿ ಅವರ ಸಾವಿನ ಬಳಿಕ ಸುರೇಶ್ ಅಂಗಡಿ ಕುಟುಂಬದ ಪರ ಕ್ಷೇತ್ರದಲ್ಲಿ ಸಹಾನೂಭೂತಿ ವ್ಯಕ್ತವಾಗುತ್ತಿದೆ. ಅಲ್ಲದೆ ಸುರೇಶ್ ಅಂಗಡಿ ಅವರೂ ಕೂಡ ಕೇಂದ್ರ ಸರ್ಕಾರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಹೀಗಾಗಿ ಬಿಜೆಪಿ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಖೂಬಾಗೆ ನಿರಾಸೆ
ಈ ನಡುವೆ,  ಬಸವಕಲ್ಯಾಣ ಕ್ಷೇತ್ರದಲ್ಲಿ ಪಕ್ಷದ ಟಿಕೆಟ್​ ಆಕಾಂಕ್ಷಿ ಮಲ್ಲಿಕಾರ್ಜುಕ ಖೂಬಾಗೆ ನಿರಾಸೆಯಾಗಿದೆ. ಬೈಎಲೆಕ್ಷನ್​ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಲ್ಲಿಕಾರ್ಜುನ ಖೂಬಾಗೆ ನಿರಾಸೆಯಾಗಿದೆ.

ರತ್ನಪ್ರಭಾ ಕಣಕ್ಕೆ
ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಚುನಾವಣೆಯ ಅಭ್ಯರ್ಥಿಯನ್ನಾಗಿ ಬಿಜೆಪಿಯ ಘೋಷಿಸಿದೆ. ಐಎಎಸ್‌ನ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರತ್ನಪ್ರಭಾ, ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು.

ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ
ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ಆಗಿದೆ. ಬಿಜೆಪಿ ಕೋರ್ ಕಮಿಟಿಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಬಿ.ಶ್ರೀರಾಮುಲು ಹಾಗೂ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸೇರ್ಪಡೆ ಆಗಿದ್ದಾರೆ. ಕೋರ್ ಕಮಿಟಿ ಸದಸ್ಯರಾಗಿದ್ದ ಸಿ.ಟಿ.ರವಿ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದಾರೆ. 13 ಸದಸ್ಯರ, 3 ವಿಶೇಷ ಆಹ್ವಾನಿತರ ಸಮಿತಿ ಪುನಾರಚನೆ ಆಗಿದೆ. ಪಕ್ಷದ ವರಿಷ್ಠರು ರಾಜ್ಯದ ಕೋರ್ ಕಮಿಟಿ ಪುನರ್ ರಚಿಸಿದ್ದಾರೆ. ಸಚಿವ ಲಿಂಬಾವಳಿ ಮತ್ತು ಶಾಸಕ ಸಿ.ಎಂ.ಉದಾಸಿ ಅವರನ್ನು ಕಮಿಟಿಯಿಂದ ಕೈಬಿಡಲಾಗಿದೆ.


Stay up to date on all the latest ರಾಜಕೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp