ಸಿಡಿ ವಿವಾದ: ಪ್ರತಿಬಂಧಕಾಜ್ಞೆ ತಂದ ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಆಗ್ರಹಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ.

Published: 25th March 2021 09:03 AM  |   Last Updated: 25th March 2021 12:38 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದ ಆರು ಸಚಿವರು ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ. ಈ 6 ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಲಾಗಿದ್ದು, ಈ ಕುರಿತು ಕಾನೂನು ತಜ್ಞರಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಆರೋಗ್ಯ ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ತಿರುಗೇಟು ನೀಡಿದ್ದಾರೆ.

ಸುಧಾಕರ್‌ ಅವರು ಬಹಳ ಉದ್ಧಟತನದ ಮಾತನ್ನ ಹೇಳಿದ್ದಾರೆ. 225 ಜನರ ಮೇಲೆ ಸಂಶಯ ಬರುವ ರೀತಿ ಮಾತನ್ನಾಡಿದ್ದಾರೆ. ಮನೆಯಲ್ಲೂ ಸಂಶಯ ಮೂಡುವಂತೆ ಹೇಳಿದ್ದಾರೆ. ಸಿಎಂ ಯಡಿಯೂರಪ್ಪ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮೇಲೂ ಸಂಶಯ ಮೂಡುವಂತೆ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದು ಬೇಜವಾಬ್ದಾರಿ ಹೇಳಿಕೆ.. 225 ರಲ್ಲಿ ಹೆಣ್ಣು ಮಕ್ಕಳು ಇದ್ದಾರೆ. ಇವರು ಹೊರಗೆ ಏನು ಹೇಳಬೇಕು..? ಇವರು ರಾಜೀನಾಮೆ ಕೊಡಬೇಕು. ಸುಧಾಕರ್ ಸೇರಿದಂತೆ ಆರು ಜನ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದೇವೆ. ಇವರ ಸಿಡಿಗಳು ಇವೆ ಅದಕ್ಕೆ ವಿಲಿವಿಲಿ ಅಂತಾ ಒದ್ದಾಡ್ತಿದ್ದಾರೆ. ಸದನಕ್ಕೆ ಒಂದು ಗೌರವ ಇರುತ್ತೆ, ಸದನದ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.


Stay up to date on all the latest ರಾಜಕೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp