ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಯತ್ನ: ಯುವ ಕಾಂಗ್ರೆಸ್ ತೀವ್ರ ಪ್ರತಿಭಟನೆ:  ರಕ್ಷಾ ರಾಮಯ್ಯ ಮತ್ತಿತರರ ಬಂಧನ

ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡು ಮಹಿಳಾ ಸಮುದಾಯಕ್ಕೆ ಅನ್ಯಾಯ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸುವಂತೆ ಆಗ್ರಹಿಸಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು.

Published: 27th March 2021 10:39 PM  |   Last Updated: 27th March 2021 10:39 PM   |  A+A-


Ramesh jarkiholi

ರಮೇಶ್ ಜಾರಕಿಹೊಳಿ

Posted By : Srinivas Rao BV
Source : UNI

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡು ಮಹಿಳಾ ಸಮುದಾಯಕ್ಕೆ ಅನ್ಯಾಯ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸುವಂತೆ ಆಗ್ರಹಿಸಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು.

ಸಚಿವ ರಮೇಶ್ ಜಾರಕಿಹೊಳಿ ಅವರ ಸದಾಶಿವನಗರ ನಿವಾಸದ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ರಮೇಶ್ ಜಾರಕಿಹೊಳಿ ಕೂಡಲೇ ಕ್ಷಮೆ ಕೇಳುವಂತೆ ಒತ್ತಾಯಿಸಿ  ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಮೇಶ್ ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.  

ಬಳಿಕ ಪೊಲೀಸರು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರ ತಂಡವನ್ನು ಪೊಲೀಸರು ಬಂಧಿಸಿ ಸದಾಶಿವ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.

ಇದಕ್ಕೂ ಮುನ್ನ ಪ್ರತಿಭಟನೆ ನಡೆಯಿತು. “ ಬಿಜೆಪಿ ಡೌನ್ ಡೌನ್, ರಮೇಶ್ ಜಾರಕಿಹೊಳಿ ಡೌನ್ ಡೌನ್ “ ಎಂದು ಘೋಷಣೆ ಕೂಗಿದರು. ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿರುವ ಸುಳಿವು ದೊರೆಯುತ್ತಿದ್ದಂತೆ ಪೊಲೀಸರು ವ್ಯಾಪಕ ಬಿಗಿ ಭದ್ರತೆ ಕೈಗೊಂಡಿದ್ದರು. ಇದಕ್ಕೂ ಮುನ್ನ ಪ್ರದೇಶ ಯುವ ಕಾಂಗ್ರೆಸ್ ನ ಮತ್ತೊಂದು ತಂಡ ರಮೇಶ್ ಜಾರಕಿಹೊಳಿ ಮನೆ ಮುಂದೆ ಪ್ರತಿಭಟನೆ ನಡೆಸಿತು. ಇವರನ್ನೂ ಸಹ ಪೊಲೀಸರು ಬಂಧಿಸಿ ಕರೆದೊಯ್ದರು.

ಮತ್ತೊಂದೆಡೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರ ಮನೆಯತ್ತ ಆಗಮಿಸಿ ರಕ್ಷಣಾ ಕೋಟೆ ನಿರ್ಮಿಸಿದ್ದರು.


Stay up to date on all the latest ರಾಜಕೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp