ಸಿಡಿ ಹಗರಣ 'ಹನಿಟ್ರ್ಯಾಪ್'ನಂತೆ ಕಾಣುತ್ತಿದೆ, ನಾಚಿಕೆ ಪಡುವಂತಾ ಸ್ಥಿತಿಯಲ್ಲಿ ರಾಜ್ಯ ನಿಂತಿದೆ: 'ಕೈ' ಕುಟುಕಿದ ಜೆಡಿಎಸ್

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಪ್ರಶ್ನಿಸಿದೆ.

Published: 27th March 2021 03:33 PM  |   Last Updated: 27th March 2021 04:03 PM   |  A+A-


HDKumaraswamy1

ಎಚ್. ಡಿ. ಕುಮಾರಸ್ವಾಮಿ

Posted By : Vishwanath S
Source : Online Desk

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಪ್ರಶ್ನಿಸಿದೆ.

ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ 'ಹನಿಟ್ರ್ಯಾಪ್‌' ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜೆಡಿಎಸ್ ಕಾಂಗ್ರೆಸ್ ನಾಯಕರ ವಿರುದ್ಧ ಬೊಟ್ಟು ಮಾಡಿದೆ.

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು... ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ. 

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.


Stay up to date on all the latest ರಾಜಕೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp