ಕರ್ನಾಟಕ ಉಪಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಗೃಹ ಸಚಿನ ಬೊಮ್ಮಾಯಿ ವಿಶ್ವಾಸ

ಕರ್ನಾಟಕದಲ್ಲಿ ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಗೃಹ ಸಚಿನ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published: 30th March 2021 02:48 PM  |   Last Updated: 30th March 2021 06:01 PM   |  A+A-


Basavaraj Bommai

ಬಸವರಾಜ್ ಬೊಮ್ಮಾಯಿ

Posted By : Srinivasamurthy VN
Source : The New Indian Express

ಕಲಬುರಗಿ: ಕರ್ನಾಟಕದಲ್ಲಿ ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಗೃಹ ಸಚಿನ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸವಕಲ್ಯಾಣಕ್ಕೆ ತೆರಳಲು ಕಲಬುರಗಿಗೆ ಬಂದಿಳಿದ ಬೊಮ್ಮಾಯಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 'ಉಪಚುನಾವಣೆ ನಡೆಯುತ್ತಿರುವ ಬೆಳಗಾವಿ, ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ‌ಲೋಕಸಭಾ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಹೇಳಿದರು. 

ಇದೇ ವೇಳೆ ಬಸವ ಕಲ್ಯಾಣದಲ್ಲಿ ಭುಗಿಲೆದ್ದಿರುವ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನದ ಕುರಿತು ಮಾತನಾಡಿದ ಬೊಮ್ಮಾಯಿ ಅವರು, 'ಬಸವಕಲ್ಯಾಣದಲ್ಲಿ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಅಸಮಾಧಾನಗಳು ಉಂಟಾಗುವುದು ಸಹಜ. ಟಿಕೆಟ್ ಸಿಗದೇ ಇರುವುದಕ್ಕೆ ಮುನಿಸಿಕೊಂಡಿರುವ ಮಲ್ಲಿಕಾರ್ಜುನ ‌ಖೂಬಾ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ಅಂತೆಯೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ‌ಆಡಳಿತಕ್ಕಿಂತಲೂ ಅತ್ಯುತ್ತಮವಾಗಿದೆ ಎಂದ ಬೊಮ್ಮಾಯಿ,  ಕಾಂಗ್ರೆಸ್ ಪಕ್ಷದವರು ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ 52 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು  ಉತ್ತರಿಸಿದರು.
 


Stay up to date on all the latest ರಾಜಕೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp