ಉಪ ಚುನಾವಣೆ; ಬೆಳಗಾವಿಯಲ್ಲಿ ಮಂಗಳಾ ಅಂಗಡಿ, ಮಸ್ಕಿಯಲ್ಲಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ

ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮಂಗಳಾ ಅಂಗಡಿ ಮತ್ತು ಮಸ್ಕಿಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. 

Published: 30th March 2021 01:55 PM  |   Last Updated: 30th March 2021 05:58 PM   |  A+A-


Mangala Angadi-Prathap Gowda Patil

ನಾಮಪತ್ರ ಸಲ್ಲಿಸಿದ ಮಂಗಳಾ ಅಂಗಡಿ, ಪ್ರತಾಪ್ ಗೌಡ ಪಾಟೀಲ್

Posted By : Srinivasamurthy VN
Source : Online Desk

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮಂಗಳಾ ಅಂಗಡಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. 

ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದಾಗಿ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಸುರೇಶ್ ಅಂಗಡಿ ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಗಿದ್ದರು.

ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು.

 

ಮಸ್ಕಿಯಲ್ಲಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ
ಇತ್ತ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಕೂಡ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಈ ವೇಳೆ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಸಚಿವ ಶ್ರೀರಾಮುಲು ಅವರು ಸಾಥ್ ನೀಡಿದರು. 

ಇನ್ನು ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ನಾಮಪತ್ರ ಸಲ್ಲಿಸಲಿದ್ದಾರೆ.  


Stay up to date on all the latest ರಾಜಕೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp