ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೋ, ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ: ಬಸವರಾಜ ಬೊಮ್ಮಾಯಿ
ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ. ತಾವು ಕಾನೂನು ಮತ್ತು ಗೃಹ ಸಚಿವನಾದರೂ ಎಸ್ಐಟಿ ತನಿಖೆ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
Published: 31st March 2021 05:59 PM | Last Updated: 31st March 2021 05:59 PM | A+A A-

ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ. ತಾವು ಕಾನೂನು ಮತ್ತು ಗೃಹ ಸಚಿವನಾದರೂ ಎಸ್ಐಟಿ ತನಿಖೆ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಎಸ್ ಐಟಿ ತನ್ನ ಕೆಲಸ ಮಾಡುತ್ತಿದೆ. ಅಧಿಕಾರಿಗಳಿಗೆ ಪೂರ್ಣಸ್ವಾತಂತ್ರ್ಯ ಕೊಟ್ಟಿದ್ದೇವೆ. ಕಾನೂನಿನ ಪ್ರಕಾರವೇ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಂಗ್ರೆಸ್ ಅನಗತ್ಯ ಟೀಕೆ ಪ್ರತಿಭಟನೆ ಟ್ವಿಟ್ ಮಾಡಿ ಗೊಂದಲ ಸೃಷ್ಟಿಸುತ್ತಿದೆ. ಮೇಟಿ ಪ್ರಕರಣದಲ್ಲಿ ಕನಿಷ್ಠ ಎಫ್ ಐಆರ್ ಕೂಡ ಹಾಕಿರಲಿಲ್ಲ. ಪ್ರತಿಭಟನೆ, ಟ್ವಿಟ್, ಟೀಕೆಗಳು ಯಾವುದೂ ಎಸ್ಐಟಿ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದರು.
ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ನಿಶ್ಚಿತವಾಗಿ 20,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ. ಖೂಬಾ ನಮ್ಮ ಸ್ನೇಹಿತರೆ, ಅವರೂ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ನಾನು, ಸೋಮಣ್ಣ ಮತ್ತು ಸವದಿಯವರು ಮಾತುಕತೆ ನಡೆಸಿದ್ದೇವೆ. ನಾಮಪತ್ರ ವಾಪಸ್ ಪಡೆಯಲು ಇನ್ನು ಸಮಯವಿದೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದರು.