ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿಗೆ ಭಾರೀ ಮುಖಭಂಗ

ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಪಕ್ಷ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರಭಾವಿ ಸಚಿವ, ಶಾಸಕರಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಾಗು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. 

Published: 01st May 2021 01:28 PM  |   Last Updated: 01st May 2021 01:33 PM   |  A+A-


Yediyurappa

ಯಡಿಯೂರಪ್ಪ

Posted By : Shilpa D
Source : The New Indian Express

ಶಿವಮೊಗ್ಗ: ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಪಕ್ಷ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರಭಾವಿ ಸಚಿವ, ಶಾಸಕರಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಾಗು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. 

10 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ 7, ಜೆಡಿಎಸ್ -2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ, ಆಡಳಿತಾರೂಡ ಪಕ್ಷವೇ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ವಾಡಿಕೆ, ಆದರೆ ಈ ಬಾರಿ ಸಿಎಂ ತವರು ಜಿಲ್ಲೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ.

ಇನ್ನು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ 15 ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಕಂಡಿದೆ. 6 ವಾರ್ಡ್‍ಗಳಲ್ಲಿ ಅಷ್ಟೇ ಬಿಜೆಪಿ ಗೆದ್ದಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತವರು ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಶಾಕ್ ಕೊಟ್ಟಿದ್ದಾರೆ. ಇದು ಒಂದು ರೀತಿ ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಮಡಿಕೇರಿ ಪುರಸಭೆಯಲ್ಲಿ ಮಾತ್ರ ಗೆಲುವು ಸಾಧಿಸಿದೆ. ಬಿಜೆಪಿ ಪರ ಅಲೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಂಡು ಬಂದಿಲ್ಲ, ಬಳ್ಳಾರಿ ಮಹಾನಗರ ಪಾಲಿಕೆಯ 39 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 21 ಸ್ಥಾನ ಗೆದ್ದುಕೊಳ್ಳುವ ಮೂಲಕ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕೇವಲ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಮುಖಭಂಗ ಅನುಭವಿಸಿದೆ.

ಭದ್ರಾವತಿಯಲ್ಲಿಯೂ 35 ಸ್ಥಾನಗಳಿದ್ದು 34 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದೆ. ಒಂದು ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಒಟ್ಟು 35 ವಾರ್ಡ್​ಗಳಲ್ಲಿ ಕಾಂಗ್ರೆಸ್​ 18 ವಾರ್ಡ್​ಗಳಲ್ಲಿ ಗೆಲುವು ಸಾಧಿಸಿದೆ. ಉಳಿದ 4 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಇನ್ನು 25 ವರ್ಷಗಳಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಚುನಾವಣೆಯಲ್ಲಿ ಅಧಿಪತ್ಯಕ್ಕೆ ಸಾಧಿಸಿಕೊಂಡು ಬಂದಿರುವ ಬಿಜೆಪಿಗೆ ಈ ಬಾರಿ ಮುಖಭಂಗವಾಗಿದೆ. ಈ ಬಾರಿ ಚುನಾವಣೆಯಲ್ಲಿ 15 ವಾರ್ಡ್​ಗಳ ಪೈಕಿ 9ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಬಿಜೆಪಿ 6 ವಾರ್ಡ್​ಗಳಲ್ಲಿ ಗೆದ್ದಿದೆ.

ರಾಮನಗರ ನಗರಸಭೆ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಸ್ಪಷ್ಟ‌ ಬಹುತದೊಂದಿಗೆ ಕಾಂಗ್ರೆಸ್​ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಒಟ್ಟು 31 ವಾರ್ಡ್​ಗಳ ಪೈಕಿ ಕಾಂಗ್ರೆಸ್ 19 ಹಾಗೂ ಜೆಡಿಎಸ್​​​ 11 ವಾರ್ಡ್​ನಲ್ಲಿ ಗೆಲುವು ಸಾಧಿಸಿದ್ದರೆ, ಒಂದು ವಾರ್ಡ್​ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಒಂದು ವಾರ್ಡ್​ನಲ್ಲೂ ಖಾತೆ ತೆರೆದಿಲ್ಲ. ಇದರಿಂದ ಮಾಜಿ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಮನಗರ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ್ ಗೆ ಮುಖಭಂಗವಾದಂತಿದೆ.

ಹಾಸನದ ಬೇಲೂರು ಪುರಸಭೆ ಮೊದಲ ಬಾರಿಗೆ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದ್ದು, ಶತಾಯ ಗತಾಯ ಗೆಲುವು ಸಾಧಿಸಬೇಕು ಎಂದುಕೊಂಡಿದ್ದ ಜೆಡಿಎಸ್​ಗೆ ಮುಖಭಂಗವಾಗಿದೆ. 25 ವಾರ್ಡ್​ನಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದ್ದು, 5 ವಾರ್ಡ್​ನಲ್ಲಿ ಜೆಡಿಎಸ್​ಗೆ ಗೆಲುವಾದರೆ, ಕೇವಲ ಒಂದು ಕಡೆ ಬಿಜೆಪಿ ಗೆಲುವು ಸಾಧಿಸಿದೆ.


Stay up to date on all the latest ರಾಜಕೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp