ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ: ಬಿ.ವೈ.ವಿಜಯೇಂದ್ರ
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ನಿಶ್ಚಯವಾಗುತ್ತಿದ್ದಂತೆ ಜನಾದೇಶಕ್ಕೆ ತಲೆಬಾಗುತ್ತೇವೆ ಎಂದು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
Published: 02nd May 2021 12:20 PM | Last Updated: 02nd May 2021 01:51 PM | A+A A-

ಬಿ ವೈ ವಿಜಯೇಂದ್ರ
ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ನಿಶ್ಚಯವಾಗುತ್ತಿದ್ದಂತೆ ಜನಾದೇಶಕ್ಕೆ ತಲೆಬಾಗುತ್ತೇವೆ ಎಂದು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಚುನಾವಣೆಯಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ, ಇಂದಿನ ಸೋಲಿನಿಂದ ಮಸ್ಕಿ ಬಿಜೆಪಿ ಕಾರ್ಯಕರ್ತರು ಎದೆಗುಂದುವುದು ಬೇಡ, ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತನಾಗಿ ಸದಾ ನಿಮ್ಮ ಜೊತೆಗಿದ್ದು ಮುಂದಿನ ದಿನಗಳಲ್ಲಿ ಪಕ್ಷದ, ಕ್ಷೇತ್ರದ ಒಳಿತಿಗೆ ಕೆಲಸ ಮಾಡೋಣ ಎಂದು ವಿಜಯೇಂದ್ರ ಕಾರ್ಯಕರ್ತರಿಗೆ ಹೇಳಿದ್ದಾರೆ.
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.
— Vijayendra Yeddyurappa (@BYVijayendra) May 2, 2021