ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು: ಸಿಎಂ ಯಡಿಯೂರಪ್ಪ ಅಭಿನಂದನೆ

ಭಾನುವಾರ ಬಹಿರಂಗವಾದ ಕರ್ನಾಟಕದ ಎರಡು ವಿಧಾನಸಭೆ, ಒಂದು ಲೋಕಸಭೆ ಚುನಾವಣೆಗಳಲ್ಲಿ ಗೆದ್ದಂತಹಾ ಬಿಜೆಪಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ
ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಭಾನುವಾರ ಬಹಿರಂಗವಾದ ಕರ್ನಾಟಕದ ಎರಡು ವಿಧಾನಸಭೆ, ಒಂದು ಲೋಕಸಭೆ ಚುನಾವಣೆಗಳಲ್ಲಿ ಗೆದ್ದಂತಹಾ ಬಿಜೆಪಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದ್ದಾರೆ.

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ, 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧನೆಯೂ ಅಭಿನಂದನಾರ್ಹ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮತದಾರರು ಮತ್ತೊಮ್ಮೆ ಪಕ್ಷವನ್ನು ಗೆಲ್ಲಿಸಿ, ಆಶೀರ್ವದಿಸಿದ್ದಾರೆ. ಬಸವಕಲ್ಯಾಣದಲ್ಲಿ ಅನುಕಂಪದ ಅಲೆಯನ್ನೂ ಮೀರಿ ಪಕ್ಷದ ಅಭಿವೃದ್ಧಿಪರ ಹಾಗೂ ಜನಹಿತ ಪರ ಕಾರ್ಯಸೂಚಿಗೆ ಮತದಾರರು ಒಲವು ತೋರಿದ್ದಾರೆ.

ಅಸ್ಸಾಂನಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಮರಳಿದ್ದು, ಪುದುಚೇರಿಯಲ್ಲೂ ಸರ್ಕಾರ ರಚನೆಯಲ್ಲಿ ಪಕ್ಷ ಭಾಗಿಯಾಗಿದೆ. 

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಸಂಖ್ಯಾಬಲವನ್ನು 3 ರಿಂದ 75 ಸ್ಥಾನಗಳಿಗೆ ಹೆಚ್ಚಿಸಿಕೊಂಡಿರುವುದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಮತಪ್ರಮಾಣ ಹೆಚ್ಚಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com