ಇದು ಸಂಭ್ರಮಾಚರಣೆ ಮಾಡುವ ಸಮಯವಲ್ಲ, ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸೋಣ: ಡಿ ಕೆ ಶಿವಕುಮಾರ್

ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Published: 02nd May 2021 01:20 PM  |   Last Updated: 02nd May 2021 01:55 PM   |  A+A-


D K Shivakumar

ಡಿ ಕೆ ಶಿವಕುಮಾರ್

Posted By : Sumana Upadhyaya
Source : Online Desk

ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕಿನಿಂದ ನಿತ್ಯವೂ ಅಪಾರ ಸಾವು-ನೋವು ಉಂಟಾಗುತ್ತಿದೆ, ಜನರು ಬಹಳ ಸಂಕಷ್ಟದಲ್ಲಿದ್ದಾರೆ, ಹೀಗಿರುವಾಗ ಇದು ಸಂಭ್ರಮಪಡುವ ಸಮಯವಲ್ಲ, ಗುಂಪು ಸೇರಿ, ಪಟಾಕಿ ಹಚ್ಚಿ ಸಿಹಿ ತಿಂದು ಸಂಭ್ರಮಾಚರಣೆ ಮಾಡಬೇಡಿ, ಚುನಾವಣಾ ಆಯೋಗ ಕೂಡ ಸ್ಪಷ್ಟವಾಗಿ ಸಂಭ್ರಮಾಚರಣೆ ಮಾಡಬಾರದೆಂದು ಹೇಳಿದೆ, ಯಾರೂ ನಿಯಮ ಉಲ್ಲಂಘಿಸಬೇಡಿ ಎಂದು ಮನವಿ ಮಾಡಿಕೊಂಡರು.

ಮಸ್ಕಿ ಮತ್ತು ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸದಲ್ಲಿದ್ದೇವೆ, ಈ ಚುನಾವಣಾ ಫಲಿತಾಂಶ ಎಲ್ಲ ಪಕ್ಷಕ್ಕೂ ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಎಂದು ಡಿ ಕೆ ಶಿವಕುಮಾರ್ ಹೇಳಿದರು.


Stay up to date on all the latest ರಾಜಕೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp