ಬೆಳಗಾವಿ ಲೋಕಸಭೆ ಉಪಚುನಾವಣೆ: ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿಗೆ ಗೆಲುವು

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.

Published: 02nd May 2021 06:22 PM  |   Last Updated: 03rd May 2021 11:40 AM   |  A+A-


Mangala Angadi

ಮಂಗಳಾ ಅಂಗಡಿ

Posted By : Vishwanath S
Source : Online Desk

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಲೋಕಸಭೆಗೆ ಉಪಚುನಾವಣೆ ನಡೆದಿತ್ತು. ಬಿಜೆಪಿ ತನ್ನ ಅಭ್ಯರ್ಥಿಯಾಗಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರನ್ನು ಕಣಕ್ಕಿಳಿಸಿತ್ತು. ಇನ್ನು ಕಾಂಗ್ರೆಸ್ ಸಹ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಿತ್ತು. 

ಇಬ್ಬರ ನಡುವೆ ನಡೆದ ತೀವ್ರ ಹಣಾಹಣಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಕೊನೆಯ 7 ಸುತ್ತುಗಳ ಮತ ಎಣಿಕೆಯೊರೆಗೂ ಮುನ್ನಡೆ ಸಾಧಿಸಿದ್ದರು. ಆದರೆ ನಂತರ ಮಂಗಳಾ ಅಂಗಡಿ ಅವರು ಮುನ್ನಡೆ ಸಾಧಿಸುವ ಮೂಲಕ ಗೆಲುವ ದಾಖಲಿಸಿದ್ದಾರೆ. 

ಮಂಗಳಾ ಅಂಗಡಿಯವರು ಬರೋಬ್ಬರಿ 4,35,202 ಮತಗಳನ್ನು ಪಡೆದಿದ್ದರೆ ಸತೀಶ್ ಜಾರಕಿಹೊಳಿ ಅವರು 4,32,299 ಮತಗಳನ್ನು ಪಡೆದಿದ್ದು 5240 ಮತಗಳ ಅಂತರದಿಂದ ಮಂಗಳಾ ಅಂಗಡಿ ಅವರು ಗೆಲುವು ಸಾಧಿಸಿದ್ದಾರೆ. 


Stay up to date on all the latest ರಾಜಕೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp