ಸಿದ್ದರಾಮಯ್ಯನವರೇ, ನೀವು ನಿಮ್ಮದೇ ಪಕ್ಷಕ್ಕೆ ಮೋಸ ಮಾಡುವುದನ್ನು ಬಿಡಿ: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ರಾಜಕೀಯ ಎಂದ ಮೇಲೆ ಆರೋಪ-ಪ್ರತ್ಯಾರೋಪ ಸಾಮಾನ್ಯ. ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದ ನಂತರ ರಾಜಕೀಯ ನಾಯಕರು ತಮ್ಮ ಅನುಕೂಲದ ರೀತಿಯಲ್ಲಿ ಹೇಳಿಕೆ ನೀಡುವುದು ಕೂಡ ಸಾಮಾನ್ಯ.
ಹೆಚ್ ಡಿ ಕುಮಾರಸ್ವಾಮಿ-ಸಿದ್ದರಾಮಯ್ಯ
ಹೆಚ್ ಡಿ ಕುಮಾರಸ್ವಾಮಿ-ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯ ಎಂದ ಮೇಲೆ ಆರೋಪ-ಪ್ರತ್ಯಾರೋಪ ಸಾಮಾನ್ಯ. ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದ ನಂತರ ರಾಜಕೀಯ ನಾಯಕರು ತಮ್ಮ ಅನುಕೂಲದ ರೀತಿಯಲ್ಲಿ ಹೇಳಿಕೆ ನೀಡುವುದು ಕೂಡ ಸಾಮಾನ್ಯ.

ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಹಾಕಿದ್ದು ಕಾರಣ ಎಂದು ವ್ಯಾಖ್ಯಾನಿಸಿದ್ದರು ನಾಯಕ ಸಿದ್ದರಾಮಯ್ಯ.

ಈ ಮಾತಿನಿಂದ ಕೆರಳಿ ಕೆಂಡವಾಗಿರುವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ, ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನಗಳಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ನೀವು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವುದು ಗೊತ್ತಿಲ್ಲದ ಸಂಗತಿಯೇನಲ್ಲ, ಮಸ್ಕಿಯಲ್ಲಿ ನಿಮ್ಮದೇ ಅಭ್ಯರ್ಥಿಯನ್ನು ಸೋಲಿಸಲು ನೀವು ಪ್ರಯತ್ನಿಸಿದ್ದಿರಿ. ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ, ಜೆಡಿಎಸ್ ಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ತಿವಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com