ಬೆಳಗಾವಿ ಉಪ ಚುನಾವಣೆಯಲ್ಲಿ ಕಡಿಮೆ ಅಂತರದ ಗೆಲುವು: ವರದಿ ಕೇಳಿದ ದೆಹಲಿಯ ಬಿಜೆಪಿ ನಾಯಕರು!

ಇತ್ತೀಚಿನ ಉಪ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ವರಿಷ್ಠರು ಬೇಸರ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ಬಿಜೆಪಿ
ಬಿಜೆಪಿ

ಬೆಂಗಳೂರು: ಇತ್ತೀಚಿನ ಉಪ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ವರಿಷ್ಠರು ಬೇಸರ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

ರಾಜ್ಯ ಬಿಜೆಪಿ.ಉಸ್ತುವಾರಿ ಅರುಣ್ ಸಿಂಗ್  ಈ ಸಂಬಂಧ ಕಾರಣ ರಾಜ್ಯ ಬಿಜೆಪಿ ನಾಯಕರಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆನ್ನಲಾಗಿದೆ.

ಈ ಸಂಬಂಧ ಶನಿವಾರ ಸಂಜೆ ವರ್ಚ್ಯುವಲ್  ಮೂಲಕ ನಡೆದ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆಯ ಫಲಿತಾಂಶದ ಬಗ್ಗೆಯೇ ಸುದೀರ್ಘ ಚರ್ಚೆ ನಡೆಸಲಾಗಿದೆ.ಬೆಳಗಾವಿಯಲ್ಲಿ  ಬಿಜೆಪಿ ಶಾಸಕರಿರುವ ಕ್ಷೇತ್ರಗಳಾದ ಸವದತ್ತಿ, ರಾಮದುರ್ಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬಿಜೆಪಿ ಮತ ಬಾರದಿರುವುದು ಹಾಗೂ ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಕ್ಷೇತ್ರದಲ್ಲಿ ಎಂ ಇ ಎಸ್ ಅಭ್ಯರ್ಥಿ ಹೆಚ್ಚು ಮತ ಪಡೆದಿರುವುದೇ ಕಾರಣ ಎಂದು ರಾಜ್ಯ ನಾಯಕರು ಸಮಜಾಯಿಸಿ ನೀಡಿದ್ದಾರೆ.

ಲೋಕಸಭಾ ಕ್ಷೇತ್ರದ ವಿಧಾನಸಭಾವಾರು ವರದಿ ಸಲ್ಲಿಸುವಂತೆ ಅರುಣ್ ಸಿಂಗ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com