ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ನಾನು ಈ ಮೂಲಕ ಆಗ್ರಹಿಸುತ್ತೇನೆ.

'ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ' ಎಂದಿದ್ದಾರೆ.

ಆಯುಷ್ಮಾನ್ ಭಾರತ ಯೋಜನೆ ಅಡಿ ಕೊರೊನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿರ್ಬಂಧಿಸಿರುವ 5 ಲಕ್ಷ ರೂಪಾಯಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೊನಾ ದೇಶವನ್ನು ನಲುಗಿಸುತ್ತಿರುವ ಈ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ. ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com