ನ್ಯಾಯಾಧೀಶರೇನು ಸರ್ವಜ್ಞರಲ್ಲ: ಸಿ.ಟಿ. ರವಿ ಅಸಂಬದ್ಧ ಹೇಳಿಕೆ

ಲಸಿಕೆಯೇ ತಯಾರಾಗದಿದ್ದರೆ ನಾವು ನೇಣು ಹಾಕಿಕೊಳ್ಳಲು ಆಗುತ್ತದಾ ಎಂಬ ಸದಾನಂದಗೌಡರ ಮಾತಿಗೆ ಧ್ವನಿಗೂಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ನ್ಯಾಯಾಧೀಶರೇನು ಸರ್ವಜ್ಞರಲ್ಲ ಎಂದು ಹೇಳಿದ್ದಾರೆ.
ಸಿ.ಟಿ ರವಿ
ಸಿ.ಟಿ ರವಿ

ಬೆಂಗಳೂರು: ಲಸಿಕೆಯೇ ತಯಾರಾಗದಿದ್ದರೆ ನಾವು ನೇಣು ಹಾಕಿಕೊಳ್ಳಲು ಆಗುತ್ತದಾ ಎಂಬ ಸದಾನಂದಗೌಡರ ಮಾತಿಗೆ ಧ್ವನಿಗೂಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ನ್ಯಾಯಾಧೀಶರೇನು ಸರ್ವಜ್ಞರಲ್ಲ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಸಿ.ಟಿ.ರವಿ, ನ್ಯಾಯಾಧೀಶರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನ್ಯಾಯಾಧೀಶರೇನು ಸರ್ವಜ್ಞರಲ್ಲ. ತಜ್ಞರ‌ ಸಮಿತಿ ನೀಡುವ ವರದಿಯನ್ನ ಆಧರಿಸಿಯೇ ಕೆಲಸ‌ ಮಾಡಲಾಗುತ್ತೆ ಎಂದು ಕೇಂದ್ರ ಹೇಳಿದೆ. ಕೇಂದ್ರದ ಈ ವಾದವನ್ನು ಸುಪ್ರೀಂ ಕೋರ್ಟ್‌ ಕೂಡಾ ಒಪ್ಪಿದೆ ಎಂದು ಹೇಳಿದರು.

ಸಾಂಕ್ರಾಮಿಕ ರೋಗಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲಾಗುತ್ತಿದೆ. ವಿದೇಶಗಳ ಜನಸಂಖ್ಯೆ ಮತ್ತು ಮರಣ
ಪ್ರಮಾಣ ಹಾಗೂ ಭಾರತದ ಜನಸಂಖ್ಯೆ ಮತ್ತು ಮರಣ ಪ್ರಮಾಣ ಎಲ್ಲವನ್ನು ಹೋಲಿಕೆ ಮಾಡಿ ನೋಡಲಿ.

ಇಟಲಿಯಲ್ಲಿ ನರೇಂದ್ರ ಮೋದಿ ಪ್ರಧಾನಿಯಲ್ಲ. ಈಗ ಆಗುತ್ತಿರುವ ಸಾವು-ನೋವಿಗೆ ನಾವು ಚೈನಾ ವೈರಸ್​ನ್ನು ದೂರಬೇಕೆ ಹೊರತು, ನರೇಂದ್ರ ಮೋದಿಯವರನ್ನಲ್ಲ ಎಂದು ಸಿ.ಟಿ.ರವಿ ಪ್ರಧಾನಿ ಪರ ಬ್ಯಾಟಿಂಗ್​ ಮಾಡಿದರು. ಮುಂದುವರೆದ
ಅವರು, ಬಾಧಿಸುತ್ತಿರುವ ವೈರಾಣು ಪ್ರಮಾಣ ಹೆಚ್ಚುತ್ತಿರುವ ಕಾರಣ ನಮ್ಮ ಸಿದ್ದತೆ ಸಾಕಾಗಿಲ್ಲ ಎನ್ನುವುದನ್ನು ನಾನೂ ಕೂಡ ಒಪ್ಪುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com