'ವಿನಾಶ ಕಾಲೇ ವಿಪರೀತ ಬುದ್ದಿ! ತಮ್ಮ ಅಯೋಗ್ಯತನ ಮರೆಮಾಚಲು ಬಿಜೆಪಿಗರಿಂದ ಎಷ್ಟೆಲ್ಲ ಹರಸಾಹಸ': ಕೆಪಿಸಿಸಿ

ಕೋವಿಡ್-19 ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  ಆರೋಪಿಸಿದೆ.

Published: 14th May 2021 12:40 PM  |   Last Updated: 14th May 2021 12:54 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : Online Desk

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆರೋಪಿಸಿದೆ.

'ಕುಣಿಲಾರದವನು ನೆಲನೇ ಡೊಂಕು' ಎಂದಂತೆ ಜನಪರ ಚಿಂತನೆ ಇಲ್ಲದ ಅಸಮರ್ಥ ಬಿಜೆಪಿ ಸರ್ಕಾರಕ್ಕೆ ಪ್ರತಿಯೊಂದು ವಿಷಯದಲ್ಲೂ ಹೈಕೋರ್ಟ್ ಮಾನಿಟರ್ ಮಾಡಬೇಕಾದ ಸ್ಥಿತಿ ಬಂದಿದ್ದು ದುರ್ದೈವ. ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದೆ, ರಾಜ್ಯದಲ್ಲಿ ಹೈಕೋರ್ಟ್ ಚಾಟಿ ಬೀಸುತ್ತಿದೆ. ಕೊರೊನಾ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಹೇಳಿದೆ.

ಮತ್ತೊಂದು ಟ್ವೀಟ್‌ನಲ್ಲಿ ಡಿ.ವಿ. ಸದಾನಂದಗೌಡ ಹಾಗೂ ಸಿ.ಟಿ. ರವಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದೆ. ತಮ್ಮ ಅಯೋಗ್ಯತನ ಮರೆಮಾಚಲು ಎಷ್ಟೆಲ್ಲ ಹರಸಾಹಸಪಡುತ್ತಿದ್ದಾರೆ ಬಿಜೆಪಿಗರು. ಜನರ ಪರವಾಗಿ ಮಾತನಾಡುತ್ತಿದ್ದ ವಿರೋಧಪಕ್ಷದ ನಾಯಕರ ಬಗ್ಗೆ ಮುಗಿಬಿಳುತ್ತಿದ್ದವರು ಈಗ ನ್ಯಾಯಾಧೀಶರ ವಿರುದ್ಧವೇ ಮಾತಾಡುತ್ತಿದ್ದಾರೆ. 'ವಿನಾಶ ಕಾಲೇ ವಿಪರೀತ ಬುದ್ದಿ'! ಎಂದು ತಿರುಗೇಟು ನೀಡಿದೆ.


Stay up to date on all the latest ರಾಜಕೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp