ರಕ್ಷಾ ರಾಮಯ್ಯ ವಿರುದ್ಧ ದೂರು ನೀಡಿರುವುದು ರಾಜಕೀಯ ಪಿತೂರಿ: ಕಾಂಗ್ರೆಸ್ ಆರೋಪ

ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ದೂರು ನೀಡಿದೆ.
ರಕ್ಷಾ ರಾಮಯ್ಯ
ರಕ್ಷಾ ರಾಮಯ್ಯ

ಬೆಂಗಳೂರು: ಹೋಮ್ ಐಸೋಲೇಷನ್ ನಲ್ಲಿರುವ ಕೋವಿಡ್ ಸೋಂಕಿತರಿಗೆ ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ದೂರು ನೀಡಿದೆ.

ಬಿಜೆಪಿ ಯುವ ಮೋರ್ಚಾದ ಬೆಂಗಳೂರು ಕೇಂದ್ರ ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ವಿಜಯೇಂದ್ರ ಎಂಬುವರು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮತ್ತು ತಂಡದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿರುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯ ಉದ್ದೇಶದ ಈ ದೂರಿಗೆ ನಾವು ಸೂಕ್ತ ರೀತಿಯಲ್ಲಿ ಉತ್ತರ ನೀಡುತ್ತೇವೆ ಎಂದರು.

ಬಿಜೆಪಿ ಯುವ ಮೊರ್ಚಾ ರಕ್ಷಾ ರಾಮಯ್ಯ ವಿರುದ್ಧ ದೂರು ನೀಡಿರುವುದಕ್ಕೆ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ, ಬಿಜೆಪಿ ನೀಡಿರುವ ದೂರು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ್ದಾರೆ.

ತಮಗೆ ಕೋವಿಡ್ ಸೋಂಕು ಕಂಡು ಬಂದ ಸಂದರ್ಭದಲ್ಲಿ ತಮಗೂ ಕೂಡ ಸ್ಟಿರಾಯ್ಡ್ ನೀಡಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಔಷಧಗಳನ್ನು ನೀಡಲಾಗುತ್ತದೆ. ಇದು ಯಾವುದೇ ರೀತಿಯಲ್ಲೂ ತಪ್ಪಲ್ಲ. ಹಾಗೊಂದು ವೇಳೆ ತಪ್ಪು ಮಾಡಿದ್ದರೆ ಅದನ್ನು ಮೊದಲು ಸರ್ಕಾರ, ಆರೋಗ್ಯ ಸಚಿವರು, ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಲಿ ಎಂದು ಹೇಳಿದ್ದಾರೆ.

ರಕ್ಷಾ ರಾಮಯ್ಯ ಸುಶಿಕ್ಷಿತ ವ್ಯಕ್ತಿ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಅವರ ಕುಟುಂಬ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದು, ವೈದ್ಯಕೀಯ ಕಾಲೇಜು ಸಹ ನಡೆಸುತ್ತಿದೆ. ಎಂ.ಎಸ್. ರಾಮಯ್ಯ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಕುಟುಂಬ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆರೋಗ್ಯದಲ್ಲಿ ಏನಾದರೂ ತೊಂದರೆಯಾದರೆ ಮೊದಲು ಹೋಗುವುದು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ. ಇಂತಹ ಕುಟುಂಬದ ವಿರುದ್ಧ ಆರೋಪ ಸಲ್ಲದು ಎಂದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ನೀಡಿರುವ ದೂರು ವಾಸ್ತವಿಕೆತೆಯಿಂದ ಕೂಡಿಲ್ಲ. ಬಿಜೆಪಿಯವರು ಡಕ್ಸಾಜೋಕ್ಸ್ ಔಷಧಿಯನ್ನು ಐಸೋಲೇಷನ್ ಕಿಟ್ ನಲ್ಲಿ ನೀಡುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸತ್ಯಾಸತ್ಯತೆ ಅರಿಯದೇ ದೂರು ದಾಖಲಿಸಿದ್ದು,ಅವರ ಆಕ್ಷೇಪಗಳಿಗೆ ಸೂಕ್ತ [ಔಷಧ ನಿಯಂತ್ರಕರಿಗೆ] ವೇದಿಕೆಯಲ್ಲೇ ಉತ್ತರ ನೀಡುತ್ತೇವೆ ಎಂದಿದ್ದಾರೆ.

ನಾವು ವೈದ್ಯರನ್ನು ಸಂಪರ್ಕಿಸಿ ಈ ಮಾತ್ರೆ ನೀಡುತ್ತಿದ್ದೇವೆ, ಜೊತೆಗೆ ವೈದ್ಯರ ಮೊಬೈಲ್ ನಂಬರ್ ಕೂಡ ನೀಡಿದ್ದೇವೆ, ರೋಗಿಗಳು ನೇರವಾಗಿ ವೈದ್ಯರನ್ನು ಸಂಪರ್ಕಿಸಬಹುದಾಗಿದೆ,  ಬಿಬಿಎಂಪಿ ನೀಡುತ್ತಿರುವ ಕಿಟ್ ನಲ್ಲೂ ಸ್ಟೆರಾಯಿಡ್ ಮಾತ್ರೆಗಳಿದೆ, ಅದರಲ್ಲಿ ಯಾವುದೇ ಲೋಪಗಳನ್ನು ಕಂಡು ಹಿಡಿಯದ ಬಿಜೆಪಿ ನಮ್ಮ ಮೇಲೆ ಏಕೆ ದೂರು ನೀಡಿದೆ ಎಂದು ರಕ್ಷಾ ರಾಮಯ್ಯ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com