ಕಾಂಗ್ರೆಸ್ ಹಾಗೂ ಬಿಜೆಪಿಗೆ ಬೇರೆ ಬೇರೆ ಸಂವಿಧಾನವಿದೆಯೆ? ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಆಯುಕ್ತರೊಂದಿಗೆ ಸಭೆ ನಡೆಸಲು ಅನುಮತಿ ನೀಡದ ಕಾರಣ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ತೀರ್ಮಾನಿಸಿದ ಬಗ್ಗೆ ಪ್ರತಿಕ್ರಯಿಸಿರುವ ಆರ್‌ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಮತ್ತು ಬಿಜೆಪಿಗೆ ಬೇರೆ ಬೇರೆ ಸಂವಿಧಾನಗಳಿದೆಯೆ ಎಂದು ಪ್ರಶ್ನಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಆಯುಕ್ತರೊಂದಿಗೆ ಸಭೆ ನಡೆಸಲು ಅನುಮತಿ ನೀಡದ ಕಾರಣ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ತೀರ್ಮಾನಿಸಿದ ಬಗ್ಗೆ ಪ್ರತಿಕ್ರಯಿಸಿರುವ ಆರ್‌ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಮತ್ತು ಬಿಜೆಪಿಗೆ ಬೇರೆ ಬೇರೆ ಸಂವಿಧಾನಗಳಿದೆಯೆ ಎಂದು ಪ್ರಶ್ನಿಸಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬರ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳ ಜಿಲ್ಲಾ ಕಚೇರಿಯಲ್ಲಿ ಸಭೆ ನಡೆಸದಂತೆ (ಈಶ್ವರಪ್ಪ ಪ್ರತಿಪಕ್ಷ ನಾಯಕರಾಗಿದ್ದಾಗ) ನನ್ನನ್ನು ಏಕೆ ತಡೆದಿತ್ತು ಎಂದು ಕೇಳಿದರು.

ಇದಲ್ಲದೆ, ಪ್ರತಿಪಕ್ಷದ ನಾಯಕರಾಗಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲು ಯಾವುದೇ ಅನುಮತಿ ಇಲ್ಲ ಎಂದು ಅವರಿಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ ಆ ನಂತರದಲ್ಲಿ ಅವರು ಅನುಮತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅದಕ್ಕೆ ಉತ್ತರ ಸಿಕ್ಕಿಲ್ಲ. “ಹಾಗಾದರೆ, ಆಗ ಕಾಂಗ್ರೆಸ್ ಸರ್ಕಾರ ಅನುಮತಿ ನಿರಾಕರಿದ್ದೇಕೆ? ಈಗ ಅವರು ಅದು ಹೇಗೆ ಉತ್ತರದ ನಿರೀಕ್ಷೆ ಮಾಡುತ್ತಿದ್ದಾರೆ?ಕಾಂಗ್ರೆಸ್ ಮತ್ತು ಬಿಜೆಪಿಗೆ ಸಂವಿಧಾನದ ಮಾನದಂಡಗಳು ಭಿನ್ನವಾಗಿದೆಯೆ?" ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಕೋವಿಡ್ ವ್ಯಾಕ್ಸಿನೇಷನ್ ಅನ್ನು ಲೇವಡಿ ಮಾಡಿದ ಕಾಂಗ್ರೆಸ್ ನಾಯಕರು ಈಗ ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಅನೇಕ ಜನರು ಲಸಿಕೆ ಪಡೆಯದೆ ಇರಲು ಕಾಂಗ್ರೆಸ್ ನ “ಡಬಲ್ ಸ್ಟ್ಯಾಂಡ್"  ಕಾರಣ ಎಂದು ಅವರು ಆರೋಪಿಸಿದರು. ಇದಲ್ಲದೆ, ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಾಂಗ್ರೆಸ್ ಜವಾಬ್ದಾರರಾಗಿರಬೇಕು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com