ಕೊರೋನಾ ಅಬ್ಬರದ ನಡುವೆಯೇ ಸಿಎಂ ಯಡಿಯೂರಪ್ಪ ಬದಲಾವಣೆ ಗುಸುಗುಸು!

ಕೊರೋನಾ ಸಾಂಕ್ರಮಿಕ ಮಹಾಮಾರಿ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗುಸು ಗುಸು ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸಾಂಕ್ರಮಿಕ ಮಹಾಮಾರಿ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗುಸು ಗುಸು ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ.

ಸರ್ಕಾರ ಮತ್ತು ಪಕ್ಷದ ನಾಯಕರು ನಡುವಿನ ಅಂತರ, ಸಂಪುಟ ಸಚಿವರ ಒಳಜಗಳ, ಹಾಗೂ ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ವಿವಿಧ ನಾಯಕರು ಲಾಬಿ ನಡೆಸುತ್ತಿದ್ದಾರೆ, ಒಂದು ವೇಳೆ ಹೈಕಮಾಂಡ್ ಒಪ್ಪಿದರೇ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ ಎನ್ನುತ್ತಿವೆ ಮೂಲಗಳು.

ಸಿಎಂ ಹುದ್ದೆ ಆಕಾಂಕ್ಷಿಗಳು ಮತ್ತವರ ತಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಲಕ್ಷ್ಮಣ ಸವದಿ,ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ್ ನಿರಾಣಿ ಅವರು ನಾಯಕತ್ವ ಬದಲಾವಣೆ ಸಂಬಂಧ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಆದರೆ ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಸಾಧ್ಯವಿಲ್ಲ ಪಕ್ಷದ ನಾಯಕರು ತಿಳಿಸಿದ್ದಾರೆ.

ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಅನೇಕ ನಾಯಕರ ಹೆಸರು ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿವೆ. ಸರ್ಕಾರ ಕೋವಿಡ 19 ವಿರುದ್ಧ ಹೋರಾಟ ನಡೆಸಿದ್ದಾರೆ. ಕರ್ನಾಟಕ ಬಿಜೆಪಿ ತನ್ನದೇ ಪಕ್ಷದ ನಾಯಕರ ವಿರುದ್ಧ ಸಮರ ಸಾರಿದೆ.

ಕೋವಿಡ್ ನಿರ್ವಹಿಸುವ ಉಸ್ತುವಾರಿ ಸಚಿವರುಗಳ ನಡುವೆ ದ್ವೇಷ ಮತ್ತು ಶೀತಲ ಸಮರಗಳು ಬೆಳೆಯುತ್ತಿದೆ. ಆದರೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಉತ್ತಮ ಎಂದು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿಕೊಡಬೇಕಾದ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಯಡಿಯೂರಪ್ಪ ವಿರುದ್ಧ ಜಗಳ, ದೂರು ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದರೂ ಕೊರೋನಾ ಸಾಂಕ್ರಾಮಿಕ ಒಂದು ತಹಬದಿಗೆ ಬರುವವರೆಗೂ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ವಯಸ್ಸು, ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿವೆ,  ಆದರೆ ಸದ್ಯದ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಅವರ ಬದಲಿಗೆ ಸೂಕ್ತರು ಯಾರೂ ಇಲ್ಲ ಎಂಬುದು ಸತ್ಯ, ಯಡಿಯೂರಪ್ಪ ಅವರ ಬದಲಾವಣೆಗೆ ಕೇಂದ್ರ ನಾಯಕರು ಉತ್ಸುಕರಾಗಿಲ್ಲ ಎಂಬುದು ಮತ್ತೊಂದು ಪ್ರಮುಖ ಅಂಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com