ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ: ಡಿ.ಕೆ. ಶಿವಕುಮಾರ್ ಮನವಿ

ಕೆಲ ಖಾಸಗಿ ಆಸ್ಪತ್ರೆಗಳು ಸುಪ್ರೀಂ ಕೋರ್ಟಿನ ನಿರ್ದೇಶನವನ್ನು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ. ಯಾವುದಾದರೂ ಆಸ್ಪತ್ರೆ ಅಧಿಕ ಶುಲ್ಕ ಪಡೆಯುತ್ತಿದ್ದರೆ ಸಾಮಾಜಿಕ ಜಾಲತಾಣದ ಮೂಲಕ ನನ್ನ ಗಮನಕ್ಕೆ ತನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌ ಶಿವಕುಮಾರ್ ಅವರು ಜನರಲ್ಲಿ ಮನವಿ‌ ಮಾಡಿಕೊಂಡಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಕೆಲ ಖಾಸಗಿ ಆಸ್ಪತ್ರೆಗಳು ಸುಪ್ರೀಂ ಕೋರ್ಟಿನ ನಿರ್ದೇಶನವನ್ನು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ. ಯಾವುದಾದರೂ ಆಸ್ಪತ್ರೆ ಅಧಿಕ ಶುಲ್ಕ ಪಡೆಯುತ್ತಿದ್ದರೆ ಸಾಮಾಜಿಕ ಜಾಲತಾಣದ ಮೂಲಕ ನನ್ನ ಗಮನಕ್ಕೆ ತನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌ ಶಿವಕುಮಾರ್ ಅವರು ಜನರಲ್ಲಿ ಮನವಿ‌ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಕೋವಿಡ್‌ನಿಂದ ಕಂಗಾಲಾಗಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಸ್ಪತ್ರೆಯ ಬಿಲ್ಲುಗಳೂ ಶಾಕ್ ನೀಡುತ್ತಿವೆ. ಮಾನ್ಯ ಸುಪ್ರೀಂ ಕೋರ್ಟ್ ಆದೇಶವನ್ನು‌ ಉಲ್ಲಂಘಿಸಿ ಹಲವು ಆಸ್ಪತ್ರೆಗಳು‌ ಹೆಚ್ಚಿನ ಶುಲ್ಕ ವಿಧಿಸುತ್ತಿವೆ. ಆಸ್ಪತ್ರೆಗಳ ಈ‌ ಕೃತ್ಯ ಕೂಡಲೇ ಕೊನೆಯಾಗಬೇಕು. ನೀವು ಇಂತಹ ಸಮಸ್ಯೆ ಎದುರಿಸುತ್ತಿದ್ದರೆ ನನ್ನನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಟ್ಯಾಗ್ ಮಾಡಿ. ಕೂಡಲೇ ಆ ಕುರಿತು ಮಾಹಿತಿ ಪಡೆದು, ಸೂಕ್ತ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ ಎಂದು ಹೇಳಿದ್ದಾರೆ. 

"ಜನರಿಂದ ಅತ್ಯಧಿಕ ಶುಲ್ಕ ಪಡೆದು ಶೋಷಿಸುತ್ತಿರುವ ಆಸ್ಪತ್ರೆ ಹಾಗೂ ವೈದ್ಯಕೀಯ ಸೇವೆ ಒದಗಿಸುವವರನ್ನು ಕರ್ನಾಟಕ ಸರ್ಕಾರ ಪೋಷಿಸುತ್ತಿದೆ. ಮನುಕುಲದ ಸಂಕಷ್ಟದ ಸಮಯದಲ್ಲಿ ಲಾಭ ಮಾಡಿಕೊಳ್ಳುವ ಮನಃಸ್ಥಿತಿಯು ಅಪರಾಧವಾಗಿದೆ. ಭರಿಸಲಸಾಧ್ಯವಾದ ವೈದ್ಯಕೀಯ ಶುಲ್ಕಗಳು ಹಾಗೂ ಬಡಜನರ ಸಂಕಷ್ಟ ನೋಡಲು ನೋವೆನಿಸುತ್ತದೆ. ಜನರ ಸಂಕಷ್ಟದ ಜೊತೆಗೆ ವೈದ್ಯಕೀಯ ಶುಲ್ಕವೂ ಏರುತ್ತಿದೆ. ಈ ಕುರಿತು ಜಾಣಕುರುಡು ಪ್ರದರ್ಶಿಸುತ್ತಿರುವ ಬಿಜೆಪಿ ಸರ್ಕಾರ, ಜನರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ನಮಗನ್ನಿಸುತ್ತಿದೆ ಎಂದು ಆರೋಪಿಸಿದರು.

ಆಸ್ಪತ್ರೆಗಳು ಆಮ್ಲಜನಕ, ಹಾಸಿಗೆ, ಕೋವಿಡ್ ಪರೀಕ್ಷೆ ಹಾಗೂ ಆಂಬುಲೆನ್ಸ್‌ಗಳಿಗೆ ಅಧಿಕ ಶುಲ್ಕ ಪಡೆಯುತ್ತಿರುವಾಗ ರಾಜ್ಯದ ಮುಖ್ಯಮಂತ್ರಿಗಳು ಮೌನವಹಿಸಿರುವುದು‌ ದುರಂತವೇ ಸರಿ, ಇಂತಹ ಸಂಕಷ್ಟದ ಸಮಯದಲ್ಲಿ ಒಬ್ಬರಿಗೊಬ್ಬರು ಸಹಾಯಕ್ಕೆ ಮುಂದಾಗಬೇಕು. ಈ ಕುರಿತು ಹಲವು ದಿನಗಳಿಂದ ದೂರನ್ನು ಕೇಳುತ್ತಿದ್ದೆ, ಇದೀಗ ಕ್ರಮಕ್ಕೆ ಮುಂದಾಗಿದ್ದೇನೆ. ವೈದ್ಯಕೀಯ ಶುಲ್ಕ ಭರಿಸಲಾಗದೆ ಯಾರೂ ಕೂಡ ಜೀವ ಕಳೆದುಕೊಳ್ಳಬಾರದು. ಆಸ್ಪತ್ರೆಗಳಿಂದ ತೊಂದರೆಗೊಳಗಾದರೆ ಟ್ವಿಟರ್‌ನಲ್ಲಿ @DKShivakumar ಎಂದು ಟ್ಯಾಗ್ ಮಾಡಲು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com