ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಸದ್ದು:  ಮಾಜಿ -ಹಾಲಿ ಸಿಎಂಗಳ ಆರೋಪ - ಪ್ರತ್ಯಾರೋಪ

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ.
ಸಿದ್ದರಾಮಯಮಯ ಮತ್ತು ಬಸವರಾಜ ಬೊಮ್ಮಾಯಿ
ಸಿದ್ದರಾಮಯಮಯ ಮತ್ತು ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದವರ ವಿರುದ್ದ ಆರೋಪ ಮಾಡಲು ಹೋಗದೆ ತನಿಖೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿವೆ. ಆದರೂ ಸರ್ಕಾರವೇ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐಗೆ ಇದೇ ಪ್ರಕರಣದ ತನಿಖೆಯ ಹೊಣೆಯನ್ನು ವಹಿಸಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು?’ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿದ್ದು ಸರ್ಕಾರವೇ ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ವಹಿಸಿದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಳಿದ್ದಾರೆ.‌ ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು‘ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ 2,600 ಬಿಟ್ ಕಾಯಿನ್ ದೊಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ವಿಷಯವನ್ನು ಮಾರ್ಚ್ ತಿಂಗಳಲ್ಲಿಯೇ ಜಾರಿ ನಿರ್ದೇಶನಾಲಯಕ್ಕೆ ಮತ್ತು ಏಪ್ರಿಲ್‌ನಲ್ಲಿ ಸಿಬಿಐಗೆ ವಹಿಸಲಾಗಿದೆ ಎಂದು ಹೇಳಿದರು.  ಸಿದ್ದರಾಮಯ್ಯ ಅವರು ಈ ವಿಷಯವನ್ನು ಪ್ರಸ್ತಾಪಿಸುವವರೆಗೂ ಏಕೆ ಬಹಿರಂಗಗೊಳಿಸಲಿಲ್ಲ ಎಂದು ಕಾಂಗ್ರೆಸ ನಾಯಕರು ಪ್ರಶ್ನಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಬೊಮ್ಮಾಯಿ, 2018ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಈ ವಿಷಯ ಬೆಳಕಿಗೆ ಬಂದಿದ್ದು, 2018ರಿಂದಲೇ ಸಂಪೂರ್ಣ ತನಿಖೆಯಾಗಬೇಕಿತ್ತು ಎಂದಿದ್ದಾರೆ.  ಹೂಡಿಕೆ ಮಾಡಿರುವ ವ್ಯಕ್ತಿಗಳ ಗುರುತು, ಹೂಡಿಕೆಯ ಪ್ರಮಾಣ ಮತ್ತು ವಹಿವಾಟಿನ ವಿವರಗಳನ್ನು ಹೊರತರಲು ತನಿಖೆ ನಡೆಸುವಂತೆ ಸಿದ್ದರಾಮಯ್ಯ ಕೇಳುತ್ತಿದ್ದಾರೆ. ತಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿಯೇ ಸಂಪೂರ್ಣ ತನಿಖೆ ನಡೆಸಬಹುದಾಗಿತ್ತು, ಈಗ ಶ್ರೀಕಿ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಬಯಲಿಗೆಳೆಯಬೇಕಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾರೂ ತಮಗೆ ಯಾವುದೇ ಪ್ರಕರಣವನ್ನು ಶಿಫಾರಸ್ಸು ಮಾಡುವ ಅಗತ್ಯವಿಲ್ಲದ ಕಾರಣ ಇಡಿ ಸ್ವಯಂ ಪ್ರೇರಿತವಾಗಿ ಇದನ್ನು ಕೈಗೆತ್ತಿಕೊಂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ರಾಜಕೀಯವಾಗಿ ಯಾರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬುದರ ಕುರಿತು ಶ್ರೀಕಿ ಹೇಳಿಕೆಗಳನ್ನು ತಿಳಿದುಕೊಳ್ಳಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com