ಕಾಂಗ್ರೆಸ್ ಅಪಪ್ರಚಾರಕ್ಕೆ ಜನತೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ
ಜೆಡಿಎಸ್ ಬಿಜೆಪಿ ಬಿ ಟೀಮ್ ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಸಮಯದಲ್ಲಿ ಮಾಡಿದ ದುರುದ್ದೇಶಪೂರಿತ, ಸಲ್ಲದ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಸೂಕ್ತ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.
Published: 02nd November 2021 04:25 PM | Last Updated: 02nd November 2021 07:08 PM | A+A A-

ಹೆಚ್. ಡಿ. ಕುಮಾರಸ್ವಾಮಿ
ಬೆಂಗಳೂರು: ಜೆಡಿಎಸ್ ಬಿಜೆಪಿ ಬಿ ಟೀಮ್ ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಸಮಯದಲ್ಲಿ ಮಾಡಿದ ದುರುದ್ದೇಶಪೂರಿತ, ಸಲ್ಲದ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಸೂಕ್ತ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಮುಂದಿನ ರಾಜಕೀಯ ದಿಕ್ಸೂಚಿ ಅಲ್ಲ. ಹೀಗಾಗಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ ಹಣದ ಪ್ರಭಾವ ಹೆಚ್ಚು ಕೆಲಸ ಮಾಡಿದೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಫರ್ಧೆ ಮಾಡಿತ್ತು ಎಂದು ಆರೋಪಿಸಲಾಗದ್ದ ಮಹಾನ್ ನಾಯಕರಿಗೆ ಫಲಿತಾಂಶ ಸೂಕ್ತ ಉತ್ತರ ಕೊಟ್ಟಿದೆ ಆದರೂ ಸಿಂದಗಿ ಫಲಿತಾಂಶ ತೀವ್ರ ಬೇಸರ ಮೂಡಿಸಿದೆ ಎಂದರು.
ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು ಕಾಂಗ್ರೆಸ್ ಹೈಜಾಕ್ ಮಾಡಿ ಜಿಡಿಎಸ್ ಸಂಘಟನೆಯನ್ನೂ ದುರ್ಬಲ ಮಾಡಿತು. ಇದೇ ನವೆಂಬರ್ 8 ರಿಂದ 16 ರವರೆಗೆ ಪಕ್ಷದ ಕಚೇರಿಯಲ್ಲಿ ಜಿಲ್ಲಾವಾರು ಸಭೆ ಕರೆಯಲಾಗಿದ್ದು ಮುಂದಿನ ದಿನದಲ್ಲಿ ಪಕ್ಷ ಬಲಿಷ‍್ಠ ಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.